ನೆಲ್ಯಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ-ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ಗೆ ಹಲವು ಪ್ರಶಸ್ತಿ

0

ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ನೆಲ್ಯಾಡಿ ಇಲ್ಲಿ ನಡೆದ ನೆಲ್ಯಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.


ಕಿರಿಯ ವಿಭಾಗದ ಛದ್ಮವೇಷ-ಶ್ರೀಶ ಪ್ರಥಮ, ಇಂಗ್ಲಿಷ್ ಕಂಠಪಾಠ-ಟಿಯಾ ,ಪ್ರಥಮ, ಚಿತ್ರಕಲೆ-ಪೂರ್ವಿ ದ್ವಿತೀಯ, ಆಶುಭಾಷಣ-ತೃಪ್ತಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಹಿರಿಯರ ವಿಭಾಗದ ಇಂಗ್ಲಿಷ್ ಕಂಠಪಾಠ-ಜಿತ್ನ ಪ್ರಥಮ, ಅಭಿನಯಗೀತೆ-ಅನ್ಷಿ ದ್ವಿತೀಯ, ಕ್ಲೇ ಮಾಡೆಲಿಂಗ್-ಧನುಷ್ ದ್ವಿತೀಯ, ಲಘು ಸಂಗೀತ-ಆನ್ಸಿಲಾ ದ್ವಿತೀಯ, ಭಕ್ತಿಗೀತೆ- ಚಂಪಿಕಾ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಚಾಲಕರಾದ ರೆ.ಫಾ ಹನಿ ಜೇಕಬ್ ಹಾಗೂ ಶಿಕ್ಷಕರು ಮಾರ್ಗದರ್ಶನ ನೀಡಿದ್ದರು.

LEAVE A REPLY

Please enter your comment!
Please enter your name here