ನ.14: ಮಂಚಿ ವ್ಯವಸಾಯ ಸೇವಾ ಸಹಕಾರ ಸಂಘದ ವಠಾರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹದ ಉದ್ಘಾಟನೆ

0

ವಿಟ್ಲ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ.) ಬೆಂಗಳೂರು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.) ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ (ಲಿ.) ಮಂಗಳೂರು ಹಾಗೂ ಮಂಚಿ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಮಂಚಿ ಕುಕ್ಕಾಜೆ ಮತ್ತು ಬಂಟ್ವಾಳ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ -2023 ಇದರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭವು ನ.೧೪ರಂದು ಕುಕ್ಕಾಜೆಯಲ್ಲಿರುವ ಮಂಚಿ ವ್ಯವಸಾಯ ಸೇವಾ ಸಹಕಾರ ಸಂಘದ ವಠಾರದಲ್ಲಿ ನಡೆಯಲಿದೆ.


ವಿಧಾನಸಭಾ ಸದಸ್ಯರಾಗಿರುವ ಯು. ಟಿ. ಖಾದರ್ ರವರು ಜಿಲ್ಲಾ ಮಟ್ಟದ ಸಹಕಾರ ಸಪ್ತಾಹದ ಉದ್ಘಾಟನೆ ಮಾಡಲಿದ್ದಾರೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ರಾಜೇಶ್ ನಾಯ್ಕ್ ಉಳಿಪಾಡಿಗುತ್ತುರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.ದ.ಕ ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷರಾಗಿರುವ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿರವರು ಧ್ವಜಾರೋಹಣಗೈಯ್ಯಲಿದ್ದಾರೆ. ಮಾಜಿ ಸಚಿವರಾಗಿರುವ ರಮಾನಾಥ ರೈರವರು ಸಹಕಾರ ಸಪ್ತಾಹದ ಮೆರವಣಿಗೆಯನ್ನು ಉದ್ಘಾಟಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾಗಿರುವ ಟಿ ಜಿ, ರಾಜಾರಾಮ ಭಟ್ ರವರು ಸಹಕಾರ ಸಂಘ ಸಂಸ್ಥೆಗಳಲ್ಲಿನ ಇತ್ತೀಚಿನ ಬೆಳವಣಿಗೆಯ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.

ಕ್ಯಾಂಪ್ಕೋ ಅಧ್ಯಕ್ಷರಾಗಿರುವ ಕಿಶೋರ್ ಕುಮಾರ್ ಕೊಡ್ಗಿ, ದ.ಕ ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ಮಂಗಳೂರು ಇದರ ಅಧ್ಯಕ್ಷರಾಗಿರುವ ಸುಚರಿತ ಶೆಟ್ಟಿ, ಟಿ.ಎ.ಪಿ.ಸಿ.ಎಮ್.ಎಸ್. ಬಂಟ್ವಾಳ ಹಾಗೂ ಸ್ಕ್ಯಾಡ್ಸ್‌ನ ಅಧ್ಯಕ್ಷರಾಗಿರುವ ರವೀಂದ್ರ ಕಂಬಳಿ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇದರ ನಿರ್ದೇಶಕರಾಗಿರುವ ಪದ್ಮಶೇಖರ ಜೈನ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇದರ ನಿರ್ದೇಶಕರಾಗಿರುವ ಪುರುಷೋತ್ತಮ ಸಾಲಿಯಾನ್,ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇದರ ನಿರ್ದೇಶಕರಾಗಿರುವ ವೆಂಕಪ್ಪ ನಾಯ್ಕ, ಸಹಕಾರ ಸಂಘಗಳ ಉಪನಿಬಂಧಕರಾಗಿರುವ ಹೆಚ್.ಎನ್ ರಮೇಶ್, ಭೂ ಅಭಿವೃದ್ಧಿ ಬ್ಯಾಂಕ್ ಬಂಟ್ವಾಳ ಇದರ ಅಧ್ಯಕ್ಷರಾಗಿರುವ ಅರುಣ್ ರೋಶನ್ ಡಿಸೋಜ, ಮಂಗಳೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾಗಿರುವ ಜೆ. ಸುಧೀರ್ ಕುಮಾರ್, ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ಇಬ್ರಾಹಿಂ ಜಿ. ಎಮ್., ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ಉಮ್ಮರ್ ಎಂ.ಬಿ.,ಬಂಟ್ವಾಳ ಸಹಕಾರ ಅಭಿವೃದ್ಧಿ ಅಧಿಕಾರಿ ಗೋಪಾಲ ಎನ್. ಜೆ., ಸಹಕಾರ ಸಂಘಗಳ ವಲಯ ಮೇಲ್ವಿಚಾರಾದ ಯೋಗೀಶ ಹೆಚ್, ಕೇಶವ ಕಿಣಿ. ಹೆಚ್ ಮೊದಲಾದವರು ಗೌರವ ಉಪಸ್ಥಿತರಿರಲಿದ್ದಾರೆ.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಗೌರವಿಸಲಾಗುವುದು ಎಂದು ಮಂಚಿ ವ್ಯವಸಾಯ ಸೇವಾ ಸಹಕಾರ ಸಂಘ ನಿ.ದ ಅಧ್ಯಕ್ಷರಾಗಿರುವ ಬಿ. ಉಮ್ಮರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here