ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೀಪಾವಳಿ ಉತ್ಸವ

0

ಆಲಂಕಾರು:ಸೀಮಾ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೀಪಾವಳಿ ಉತ್ಸವ ನಡೆಯಿತು. ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆದ ಬಳಿಕ ರಾತ್ರಿ ಶ್ರೀ ದೇವಿಗೆ ದೊಡ್ಡ ರಂಗಪೂಜೆ,ಬಲಿಯೇಂದ್ರ ಪೂಜೆ,ಬಲಿಹೊರಟು ಉತ್ಸವ ಬಟ್ಟಲು ಕಾಣಿಕೆ,ಮಹಾಪೂಜೆ,ಪ್ರಸಾದ ವಿತರಣೆ ಯಾಗಿ ಅನ್ನಸಂತರ್ಪಣೆ ನಡೆಯಿತು. ಅಗಮಿಸಿದ ಭಕ್ತಾದಿಗಳು ಶ್ರೀ ದೇವಿಯ ಉತ್ಸವದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ಅನ್ನಸಂತರ್ಪಣೆ ಪಾಲ್ಗೊಂಡರು. ಈ ಸಂಧರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಾಮೋದರ ಗೌಡ ಕಕ್ವೆ ಹಾಗು ವ್ಯವಸ್ಥಾಪನ ಸಮಿತಿಯ ಸದಸ್ಯರು ಹಾಗು ಸಿಬ್ಬಂದಿಗಳು,ಭಕ್ತಾಧಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here