ನ.16: ಮರೋಳಿಯಲ್ಲಿ ದ.ಕ.ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಾದೇಶಿಕ ಕಛೇರಿ ಉದ್ಘಾಟನೆ, ತೆಂಗು ಉತ್ಪನ್ನಗಳ ಬಿಡುಗಡೆ

0

ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಾದೇಶಿಕ ಕಛೇರಿ ಉದ್ಘಾಟನೆ ಮತ್ತು ತೆಂಗು ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮ ನ.16ರಂದು ಮಂಗಳೂರಿನ ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಬಳಿ ನಡೆಯಲಿದೆ.

ಆದಿಚುಂಚನಗಿರಿ ಮಹಾಸಂಸ್ಥಾನದ ಕಾವೂರು ಶಾಖಾ ಮಠದ ಶ್ರೀಧರ್ಮಪಾಲನಾಥ ಸ್ವಾಮೀಜಿಯವರು ದೀಪ ಪ್ರಜ್ವಲಿಸಿ ಆಶೀರ್ವಚನೆ ನೀಡಲಿದ್ದಾರೆ. ರಾಜ್ಯ ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್ ಕಚೇರಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್, ಕಾಸರಗೋಡು ಸಿಪಿಸಿಆರ್‌ಐ ಡಾ.ಹೆಬ್ಬಾರ್ ಕೆ.ಬಿ., ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ ಹೆಚ್., ನಬಾರ್ಡ್ ದ.ಕ.ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಸಂಗೀತಾ ಎಸ್.ಕರ್ತಾ, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ, ಭಾರತೀಯ ವಿಕಾಸ್ ಟ್ರಸ್ಟ್ ಜಿಲ್ಲಾ ಮುಖ್ಯಸ್ಥ ಜೀವನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಎಚ್.ಆರ್.ನಾಯ್ಕ್, ಮರೋಳಿ ವಾರ್ಡ್ ಕಾರ್ಪೋರೇಟರ್ ಕೇಶವ ಮರೋಳಿ, ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ರಮೇಶ್, ರಾಜ್ಯ ರೈತ ಹಸಿರು ಸೇನೆಯ ದ.ಕ.ಜಿಲ್ಲಾ ಸಂಚಾಲಕ ರೂಪೇಶ್ ರೈ ಅಲಿಮಾರ್ ಭಾಗವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷ ಕುಸುಮಾಧರ್ ಎಸ್.ಕೆ. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here