ಎಸ್‌ಡಿಪಿಐ ಪುಣಚ ಗ್ರಾಮ ಸಮಿತಿ ಮಾಸಿಕ ಸಭೆ

0

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನ ಸಭಾ ಕ್ಷೇತ್ರದ ಪುಣಚ ಗ್ರಾಮ ಸಮಿತಿ ಇದರ ಮಾಸಿಕ ಸಭೆ ನ.13ರಂದು ಪರಿಯಲ್ತಡ್ಕದಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆಯಿತು. ಗ್ರಾಮ ಸಮಿತಿ ಅಧ್ಯಕ್ಷರಾದ ಕಮರುದ್ದೀನ್ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್‌ರವರು ವೀಕ್ಷಕರಾಗಿ ಆಗಮಿಸಿ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು. ಸಭೆಯಲ್ಲಿ ಎಸ್‌ಡಿಪಿಐ ತಾಲೂಕು ಕಾರ್ಯದರ್ಶಿ ಉಸ್ಮಾನ್ ಎ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಶಾಫಿ ಮಾಳಿಗೆ, ರಝಾಕ್ ಪುಣಚ, ಫಾರೂಕ್, ಸಿರಾಜ್ ಹಾಗೂ ಇನ್ನಿತರ ಸದಸ್ಯರು ಉಪಸ್ಥಿತರಿದ್ದರು. ಗ್ರಾಮ ಸಮಿತಿ ಕಾರ್ಯದರ್ಶಿ ಕರೀಂ ಸ್ವಾಗತಿಸಿದರು.

LEAVE A REPLY

Please enter your comment!
Please enter your name here