ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಶ್ರೀ ದೇವರು ಹೊರಾಂಗಣ ಪ್ರವೇಶಿಸಿದರು. ಬಳಿಕ ದೀಪಾವಳಿ ಪ್ರಯುಕ್ತ ಪಾಲಕಿ ಮತ್ತು ಬಂಡಿ ಉತ್ಸವ ನೆರವೇರಿತು. ಶ್ರೀ ಕ್ಷೇತ್ರದಲ್ಲಿ ಶ್ರೀ ದೇವರ ಹೊರಾಂಗಣ ವರ್ಷಾವಧಿ ಉತ್ಸವಗಳು ಆರಂಭವಾಯಿತು.ಶ್ರೀ ಕ್ಷೇತ್ರದಲ್ಲಿ ಶ್ರೀ ದೇವರ ಪಾಲಕಿ ಉತ್ಸವ, ಭಂಡಿ ಉತ್ಸವ ಹಾಗೂ ಮಂಟಪೋತ್ಸವ ಸೇವೆಗಳು ನ.14ರಿಂದ ನಡೆಯುತ್ತದೆ. ಆನೆ, ಬಿರುದಾವಳಿ, ಮಂಗಳವಾದ್ಯಗಳ ನಿನಾದದೊಂದಿಗೆ ಶ್ರೀ ದೇವರ ಉತ್ಸವಾಧಿಗಳು ಭಕ್ತಿಶ್ರದ್ಧೆಯಿಂದ ಮಂಗಳವಾರ ನೆರವೇರಿತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಹಾಗೂ ,ಸಿಬಂದಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.