ಪಾಣಾಜೆ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಲಕ್ಷ್ಮೀಪೂಜೆ

0

ನ.‌17 ಕ್ಕೆ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹ, ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ

ಪಾಣಾಜೆ: ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಲಕ್ಷ್ಮಿಪೂಜೆ ನ. 13 ರಂದು ನಡೆಯಿತು. ಪುರೋಹಿತರಾದ ವೇ.ಮೂ. ಶ್ರೀಕೃಷ್ಣ ಭಟ್ ಬಟ್ಯಮೂಲೆ ಪೂಜಾ ವಿಧಿವಿಧಾನ ನೆರವೇರಿಸಿದರು. ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್ ಬ್ರಹ್ಮರಗುಂಡ, ಉಪಾಧ್ಯಕ್ಷ ಡಾ. ಅಖಿಲೇಶ್ ಪಿ.ಎಂ., ನಿರ್ದೇಶಕರುಗಳು ಹಾಗೂ ಸಿಬಂದಿ ವರ್ಗ ಉಪಸ್ಥಿತರಿದ್ದರು.


ನ. 17: ಸಹಕಾರಿ ಸಪ್ತಾಹ – ನೂತನ ಕಟ್ಟಡ ಉದ್ಘಾಟನೆ
ಸಂಘದ ಆಶ್ರಯದಲ್ಲಿ ಮತ್ತು ಪುತ್ತೂರು ಹಾಗೂ ಕಡಬ ತಾಲೂಕಿನ ಎಲ್ಲಾ ಸಹಕಾರ ಸಂಘಗಳ ಸಹಭಾಗಿತ್ವದಲ್ಲಿ 70 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಹಾಗೂ ಸಂಘದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ನ. 17 ರಂದು ನಡೆಯಲಿದೆ.


ನೂತನ ಕಟ್ಟಡವನ್ನು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ನೂತನ ಸಭಾಭವನವನ್ನು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮವನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ‌ ಪ್ರಸಾದ್ ಕೌಶಲ್ ಶೆಟ್ಟಿಯವರು ಧ್ವಜಾರೋಹಣಗೈಯಲಿದ್ದಾರೆ. ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್ ರವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರಿನ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ. ಎಸ್. ಆರ್. ಹರೀಶ್ ಆಚಾರ್ಯ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಳ್ಳಲಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ. ಜಯರಾಮ ರೈ ಬಳಜ್ಜ, ದ.ಕ. ಜಿಲ್ಲಾ ಸಹಕಾರ ಹಾಲು ಒಕ್ಕೂಟದ ನಿರ್ದೇಶಕ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ರಾಜಶೇಖರ ಜೈನ್, ಸಾವಿತ್ರಿ ರೈ, ಪುತ್ತೂರು ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರವೀಣ್ ರೈ ಮೇನಾಲ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


ಯಕ್ಷಗಾನ ತಾಳಮದ್ದಳೆ
ಅಪರಾಹ್ನ ಸಂಘದ ಸಿಇಒ ಹರೀಶ್ ಕುಮಾರ್ ಕಡಂದೇಲುರವರ ಪ್ರಾಯೋಜಕತ್ವದಲ್ಲಿ ಜಿಲ್ಲೆಯ ಸುಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ‘ಭೃಗುಶಾಪ’ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.

LEAVE A REPLY

Please enter your comment!
Please enter your name here