ನ.17: ಪಾಣಾಜೆಯಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ – ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ

0

ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ಪುತ್ತೂರು ತಾಲೂಕು ಸಹಕಾರಿ ಯೂನಿಯನ್, ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಪುತ್ತೂರು ಹಾಗು ಕಡಬ ತಾಲೂಕಿನ ಎಲ್ಲಾ ಸಹಕಾರ ಸಂಘಗಳ ಸಹಭಾಗಿತ್ವದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ಮತ್ತು ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ನ.17ರಂದು ಬೆಳಿಗ್ಗೆ ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆಯಲಿದೆ ಎಂದುಕ ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್ ಬಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ನಬಾರ್ಡ್‌ನ ಸಹಕಾರದಿಂದ ಕಳೆದ ವರ್ಷವೇ ಕಟ್ಟಡ ಪೂರ್ಣಗೊಳಿಸಿದ್ದೇವು. ಅದರಲ್ಲಿ ನವೀಕರಣ, ಇಂಟರ್‌ಲಾಕ್ ಅಳವಡಿಕೆ, ಶೀಟ್ ಅಳವಡಿಕೆ ಸಹಿತ ಸುಮಾರು ರೂ.1ಕೋಟಿ ವೆಚ್ಚದಲ್ಲಿ ಎಲ್ಲಾ ಕೆಲಸ ಪೂರ್ಣಗೊಂಡಿದೆ. ಕಳೆದ ವರ್ಷ ಉದ್ಘಾಟನೆ ಮಾಡುವ ತೀರ್ಮಾಣ ಮಾಡುವ ಸಂದರ್ಭದಲ್ಲಿ ನಮ್ಮ ಸಿ.ಒ ಅವರು ಅಪಘಾತದಿಂದ ಮೃತಪಟ್ಟ ಹಿನ್ನಲೆಯಲ್ಲಿ ಕಳೆದ ವರ್ಷ ಉದ್ಘಾಟನೆ ಮಾಡಲು ಸಾಧ್ಯವಾಗಿರಲಿಲ್ಲ. ಅದನ್ನು ಈ ಭಾರಿ ಸಹಕಾರಿ ಸಪ್ತಾಹದಂದೇ ಉದ್ಘಾಟನೆ ಮಾಡುತ್ತಿದ್ದೇವೆ ಎಂದ ಅವರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸಭಾಭವನ ಉದ್ಘಾಟಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಇದರ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಧ್ವಜಾರೋಹಣ ಮಾಡಲಿದ್ದಾರೆ. ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ.ಎಸ್.ಆರ್. ಹರೀಶ್ ಆಚಾರ್ಯ ಅವರು ಸಹಕಾರ ಸಂಸ್ಥೆಗಳಲ್ಲಿ ಸರಳ ವ್ಯಾಪಾರ ಪ್ರಕ್ರಿಯೆ ಮತ್ತು ಉದಯೋನ್ಮುಖ ವಲಯಗಳ ಕುರಿತು ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರು ಮತ್ತು ದ..ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಉಪಾಧ್ಯಕ್ಷರೂ ಆಗಿರುವ ಎಸ್.ಬಿ.ಜಯರಾಮ ರೈ, ದ.ಕ.ಜಿಲ್ಲಾ ಸಹಕಾರಿ ಯೂನಿಯರ್ ನಿರ್ದೇಶಕ ರಾಜಶೇಖರ ಜೈನ್, ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಸಾವಿತ್ರಿ ರೈ, ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರವೀಣ್ ರೈ ಮೇನಾಲ, ಟಿಎಪಿಸಿಎಂಎಸ್ ಅಧ್ಯಕ್ಷ ಕೃಷ್ಣಕುಮಾರ್ ರೈ, ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್, ನಿಡ್ಪಳ್ಳಿ ಗ್ರಾ.ಪಂ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್, ಪಾಣಾಜೆ ಗ್ರಾ.ಪಂ ಅಧ್ಯಕ್ಷ ಮೈಮುನತುಲ್ ಮೆಹ್ರಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಸಹಕಾರ ಸಪ್ತಾಹ ಅರ್ಥಪೂರ್ಣ ಕಾರ್ಯಕ್ರಮ:
ಸಹಕಾರಿ ಸಂಘಗಳು ರೈತರ ಜೀವನಾಡಿಯಾಗಿ ಕೆಲಸ ಮಾಡುತ್ತದೆ. ಸರಕಾರದ ಎಲ್ಲಾ ಯೋಜನೆಯನ್ನು ರೈತರಿಗೆ ನೇರವಾಗಿ ನೀಡುವ ಪ್ರಾಮಾಣಿಕೆ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಸಹಕಾರಿ ಸಪ್ತಾಹ ಒಂದು ಅರ್ಥಪೂರ್ಣ ಕಾರ್ಯಕ್ರಮ. ಇಂತಹ ಕಾರ್ಯಕ್ರಮ ಪಾಣಾಜೆಯ ಸಣ್ಣ ಹಳ್ಳಿಯಲ್ಲಿ ಮಾಡುವುದು ನಮಗೆ ಹೆಮ್ಮೆಯ ವಿಚಾರ ಎಂದು ಪದ್ಮನಾಭ ಬೋರ್ಕರ್ ತಿಳಿಸಿದರು.

ನಷ್ಟದಲ್ಲಿದ್ದ ಸಂಸ್ಥೆಗೆ ಆರ್ಥಿಕ ಸಹಕಾರ ನೀಡಿದ್ದು ಡಾ|ಎಮ್.ಎನ್.ರಾಜೇಂದ್ರ ಕುಮಾರ್:
1935ರಲ್ಲಿ ಪ್ರಾರಂಭವಾದ ಸಂಸ್ಥೆ ಗ್ರಾಮದ ಹಿರಿಯರಾದ ಗಣಪತಿ ಭಟ್ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯ ಅವರ ಮಾರ್ಗದರ್ಶನದಲ್ಲಿ ಈ ಸಹಕಾರಿ ಸಂಘ ಪ್ರಾರಂಭಗೊಂಡು ಸಂಸ್ಥೆ ಬಹಳಷ್ಟು ಎತ್ತರಕ್ಕೇರಿತ್ತು. 1974ರಲ್ಲಿ ಜಿಲ್ಲೆಯಲ್ಲೇ ಅತ್ಯಂತ ಒಳ್ಳೆಯ ಸಂಸ್ಥೆಯಾಗಿ ಪ್ರಶಸ್ತಿಯನ್ನೂ ಪಡೆದುಕೊಂಡಿತ್ತು. 1998ರಲ್ಲಿ ನಮ್ಮ ಹಿಂದಿನ ಸಿಬ್ಬಂದಿಗಳು ಮಾಡಿದ ಅವ್ಯವಹಾರದಿಂದ ಸಂಸ್ಥೆ ಸುಮಾರು ರೂ.1.5 ಕೋಟಿಯಷ್ಟು ನಷ್ಟಕ್ಕೆ ಹೋಯಿತು. ಆದರೆ ಮುಂದೆ ಸಂಸ್ಥೆಯ ನಷ್ಟವನ್ನು ಭರಿಸುವ ನಿಟ್ಟಿನಲ್ಲಿ ನಮ್ಮ ಕೋರಿಕೆಯಂತೆ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಮ್.ಎನ್.ರಾಜೇಂದ್ರ ಕುಮಾರ್ ಅವರು ಆರ್ಥಿಕ ಸಹಕಾರ ನೀಡಿದ್ದರಿಂದ ಸಂಸ್ಥೆ ಉಳಿದಿದೆ. ಪ್ರಸ್ತುತ ಸಂಸ್ಥೆ ಸುಮಾರು ರೂ. 36 ಕೋಟಿಯಷ್ಟು ಡೆಪೋಸಿಟ್, ರೂ. 56 ಕೋಟಿ ಸಾಲ ನೀಡಿ ರೂ.84ಲಕ್ಷ ಲಾಭ ಪಡೆದಿದೆ. ಸದಸ್ಯರಿಗೆ ಶೇ.12 ಡಿವಿಡೆಂಡ್ ಕೂಡಾ ನೀಡುವ ಮೂಲಕ ಸಂಸ್ಥೆ ಅಭಿವೃದ್ಧಿ ಹೊಂದಿದೆ ಎಂದು ಪದ್ಮನಾಭ ಬೋರ್ಕರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಡಾ.ಅಖಿಲೇಶ್ ಪಿ.ಎಮ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರೀಶ್ ಕುಮಾರ್ ಕೆ ಆಡಳಿತ ಮಂಡಳಿ ಸದಸ್ಯ ರಾಮ ನಾಯ್ಕ ಜರಿಮೂಲೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here