ಕಬಕ ಪುತ್ತೂರು ರೈಲು ನಿಲ್ದಾಣಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ – ಪ್ರಗತಿ ಪರಿಶೀಲನೆ

0

ಪುತ್ತೂರು:ಸಂಸದ ನಳಿನ್‌ ಕುಮಾರ್‌ ಕಟೀಲ್‌ ಪುತ್ತೂರು ಪ್ರವಾಸದಲ್ಲಿದ್ದು, ಕಾಮಗಾರಿ ಪರಿಶೀಲನೆ,ಶಿಲನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಅದರಂತೆ ನೆಹರೂನಗರದ ರೈಲ್ವೇ ಮೇಲ್ಸೆತುವೆಗೆ ಶಿಲನ್ಯಾಸ ನೆರವೇರಿಸಿದರು. ಆ ಬಳಿಕ ಕಬಕ ಪುತ್ತೂರು ರೈಲು ನಿಲ್ದಾಣಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರಸಭೆ ನಿಕಟಪೂರ್ವ ಅಧ್ಯಕ್ಷ ಕೆ.ಜೀವಂಧರ್ ಜೈನ್, ಹಿರಿಯರಾದ ಎಸ್ ಅಪ್ಪಯ್ಯ ಮಣಿಯಾಣಿ, ಕರವಾಳಿ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here