ಕೋಲ್ಪೆ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ- ಸವಾರನಿಗೆ ಗಾಯ

0

ನೆಲ್ಯಾಡಿ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೊಣಾಲು ಗ್ರಾಮದ ಕೋಲ್ಪೆ ಮಸೀದಿ ಮುಂಭಾಗದಲ್ಲಿ ನ .16ರಂದು ಮಧ್ಯಾಹ್ನ ನಡೆದಿದೆ.


ಬಂಟ್ವಾಳ ತಾಲೂಕು ಕರೋಲ್ಪಾಡಿ ನಿವಾಸಿ ದೀಕ್ಷಿತ್ (23ವ.) ಗಾಯಗೊಂಡವರಾಗಿದ್ದಾರೆ. ಇವರು ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕೋಲ್ಪೆಯಲ್ಲಿ ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿದೆ. ಲಾರಿ ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದು ಚಾಲಕ ಕೋಲ್ಪೆ ಯಲ್ಲಿ ಲಾರಿ ನಿಲ್ಲಿಸಿ ಹೊಟೇಲ್ ಗೆ ಊಟಕ್ಕೆ ಹೋಗಿದ್ದರು ಎಂದು ವರದಿಯಾಗಿದೆ. ಗಾಯಾಳು ಬೈಕ್ ಸವಾರ ದೀಕ್ಷಿತ್ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

LEAVE A REPLY

Please enter your comment!
Please enter your name here