ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಅನಘ ಕೆ.ಎ. ಕೂಟ ದಾಖಲೆಯೊಂದಿಗೆ ಚಿನ್ನದ ಪದಕ-ಎಸ್.ಜಿ.ಎಫ್.ಐ.ಗೆ ಆಯ್ಕೆ

0

ಪುತ್ತೂರು: ವಿದ್ಯಾಭಾರತಿ ವತಿಯಿಂದ ಬಿಹಾರದ ಬೇಟಿಯಾದಲ್ಲಿ ನಡೆದ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿನ ತರುಣ ವರ್ಗ ವಿಭಾಗದ 400 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಅನಘ ಕೆ.ಎ.ರವರು ಹೊಸ ಕೂಟ ದಾಖಲೆಯೊಂದಿಗೆ ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕ ಪಡೆದಿದ್ದಾರೆ. ಅಲ್ಲದೆ 100 ಮೀಟರ್ ಹರ್ಡಲ್ಸ್ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದಿದ್ದಾರೆ. ಹಾಗೂ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ‌ ಪಡೆದು ಬೆಳ್ಳಿಪದಕ ಗಳಿಸಿದ್ದಾರೆ. ಇದರೊಂದಿಗೆ ಎಸ್.ಜಿ.ಎಫ್.ಐ. ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಮಂಗಳೂರು ಶಾರದಾ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿರುವ ಅನಘ ಕೆ.ಎ.ರವರು ಕ್ರೀಡಾ ತರಬೇತುದಾರ ಮಂಗಳೂರಿನ ದಿನೇಶ್ ಕುಂದರ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿನಿಯಾಗಿರುವ ಅನಘ ಕೆ.ಎ.ರವರು ತೆಂಕಿಲ ನಿವಾಸಿ ಅನಿಲ್ ಗೌಡ ಮತ್ತು ಕವಿತಾ ಅನಿಲ್ ಅವರ ಪುತ್ರಿ.

LEAVE A REPLY

Please enter your comment!
Please enter your name here