ನ.18: ರಾಮಕುಂಜ ಆ.ಮಾ.ಶಾಲೆಯಲ್ಲಿ ’ತುಡರ್ ಪರ್ಬ’

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆ ಹಾಗೂ ನೇತ್ರಾವತಿ ತುಳುಕೂಟ ರಾಮಕುಂಜ ಇವರ ಆಶ್ರಯದಲ್ಲಿ ’ತುಡರ್ ಪರ್ಬ’ ನ.15ರಂದು ಬೆಳಿಗ್ಗೆ 10.30ಕ್ಕೆ ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕುಡ್ಲ ಇದರ ಮಾಜಿ ರಿಜಿಸ್ಟ್ರಾರ್ ಚಂದ್ರಹಾಸ ರೈಯವರು ಗೋಪೂಜೆ ನೆರವೇರಿಸಲಿದ್ದಾರೆ. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಉಮೇಶ್ ಶೆಟ್ಟಿ ಸಾಯಿರಾಂ, ಜೈ ತುಳುನಾಡ್ ಕೇಂದ್ರ ಸಮಿತಿ ಅಧ್ಯಕ್ಷ ವಿಶು ಶ್ರೀಕೇರ, ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here