ಪುತ್ತೂರು: ಪರ್ಪುಂಜ ರಾಜಜಾಲು ಶ್ರೀ ಬ್ರಹ್ಮಬೈದೇರ್ಕಳ ಗರಡಿಯ ಆಡಳಿತ ಮೊಕ್ತೇಸರ ಕೆ.ಸಂಜೀವ ಪೂಜಾರಿಯವರ ಕೂರೇಲು ಮನೆಯಲ್ಲಿ ಶ್ರೀ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ, ಮಹಾಮೃತ್ಯುಂಜಯ ಹೋಮ ಹಾಗೂ ವಿಜಯ ಚಂಡಿಕಾಯಾಗವು ನ.17ರಂದು ನಡೆಯಿತು. ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿ ಹಾಗೂ ತಂಡದ ಪುರೋಹಿತರು ವೈಧಿಕ ವಿಧಿ ವಿಧಾನಗಳನ್ನು ನಡೆಸಿಕೊಟ್ಟರು. ಬೆಳಿಗ್ಗೆ ಶ್ರೀ ಗಣಪತಿ ಹೋಮ ಬಳಿಕ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಮಹಾ ಮೃತ್ಯುಂಜಯ ಹೋಮ ನಡೆದು ಮಧ್ಯಾಹ್ನದ ವೇಳೆಗೆ ವಿಜಯ ಚಂಡಿಕಾ ಯಾಗವು ಸಮಾಪ್ತಿಗೊಂಡಿತು. ಪೂಜಾ ಕಾರ್ಯಕ್ರಮದ ಬಳಿಕ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆಯಿತು. ಕೆ.ಸಂಜೀವ ಪೂಜಾರಿ ಕೂರೇಲುರವರು ಭಕ್ತಾಧಿಗಳನ್ನು ಸ್ವಾಗತಿಸಿ, ಸತ್ಕರಿಸಿದರು. ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಸರಸ್ವತಿ ಸಂಜೀವ ಪೂಜಾರಿ, ಹರ್ಷಿತ್ ಕೂರೇಲು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.