ನ.19: ಕಲ್ಪಡ ಕೊಡಿಯಾಲದಲ್ಲಿ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ

0

ಕಾಣಿಯೂರು: ಕಲ್ಪಡ ಕೊಡಿಯಾಲ ಸ್ನೇಹಿತರ ಬಳಗದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 7ನೇ ವರ್ಷದ ಸಾಮೂಹಿಕ ಕ್ರೀಡಾಕೂಟ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವು ನ.19ರಂದು ಕಲ್ಪಡ ಮೂವಪ್ಪೆ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಲಿದೆ.

ಬೆಳಿಗ್ಗೆ ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ವೆಂಕಪ್ಪ ಗೌಡ ಕಲ್ಪಡ ಇಪ್ಪುಳ್ತಡಿ ಉದ್ಘಾಟಿಸಲಿದ್ದು, ಕೊಡಿಯಾಲ ಸ್ನೇಹಿತರ ಬಳಗದ ಅಧ್ಯಕ್ಷ ಯುವರಾಜ್ ಕಲ್ಪಡ ಇಪ್ಪುಳ್ತಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಲವಾರು ಮಂದಿ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸ್ನೇಹಿತರ ಬಳಗದ ಅಧ್ಯಕ್ಷ ಯುವರಾಜ್ ಕಲ್ಪಡ ಇಪ್ಪುಳ್ತಡಿ ಅಧ್ಯಕ್ಷತೆ ವಹಿಸಲಿದ್ದು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸುಳ್ಯ ರೋಟರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಶಿಕ್ಷಕಿ ನಳಿನಾಕ್ಷಿ ವಿ ಆಚಾರ್ಯ ಕಲ್ಮಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಹಲವಾರು ಮಂದಿ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯ ನಿವೃತ್ತ ಯೋಧ ಗಿರಿಧರ್ ಕಡೀರ ಇವರಿಗೆ ಸನ್ಮಾನ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಸ್ನೇಹಿತರ ಬಳಗದ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here