ಸಂಜೀವ ಮಠಂದೂರು ಅವರ ಆರೋಗ್ಯ ವಿಚಾರಿಸಿದ ಎ.ಸಿ.ಗಿರೀಶ್ ನಂದನ್, ದಿನೇಶ್ ಮೆದು, ಎಚ್.ಮಹಮ್ಮದ್ ಆಲಿ 

0

ಪುತ್ತೂರು: ಹಾವು ಕಡಿತಕ್ಕೊಳಗಾಗಿ ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನು ಪುತ್ತೂರು ಉಪ ವಿಭಾಗದ ಸಹಾಯಕ ಕಮೀಷನರ್ ಗಿರೀಶ್ ನಂದನ್ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಮಹಮ್ಮದ್ ಆಲಿ, ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ, ಚೆನ್ನಾವರ ಅಭ್ಯುದಯ ಯುವಕ ಮಂಡಲದ ಕಾರ್ಯದರ್ಶಿ ಧೀರಜ್ ರೈ ,ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here