ಪುತ್ತೂರು: ರೋಟರಿ ಜಿಲ್ಲೆ 3181, ವಲಯ ನಾಲ್ಕರ ರೋಟರಿ ಕ್ಲಬ್ ಪುತ್ತೂರು ಸಿಟಿ, ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಎಲೈಟ್, ಜಿಲ್ಲೆ 318 ರ ಇನ್ನರ್ ವೀಲ್ ಕ್ಲಬ್ ಪುತ್ತೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪುತ್ತೂರು, ತಾಲೂಕು ಸ್ತ್ರೀಶಕ್ತಿ ಒಕ್ಕೂಟ ಪುತ್ತೂರು ಇವುಗಳ ಸಹಯೋಗದಲ್ಲಿ ನ.18 ರಂದು ಸೈನಿಕ ಭವನ ಬಳಿಯ ರೋಟರಿ ಮನೀಷಾ ಸಭಾಂಗಣದಲ್ಲಿ ಉಚಿತ ಬಂಜೆತನ ಹಾಗೂ ಮಾಹಿತಿ ಶಿಬಿರವು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಜರಗಲಿದೆ.
ನೋವಾ ಐವಿಎಫ್ ಫರ್ಟಿಲಿಟಿ ಇಲ್ಲಿನ ತಜ್ಞರಾದ ವೈದ್ಯೆ ಡಾ.ಶ್ರೀಮತಿ ಶವೀಝ್ ಫೈಝಿರವರು ಈ ಮಾಹಿತಿ ಶಿಬಿರವನ್ನು ನಡೆಸಿಕೊಡಲಿದ್ದಾರೆ. ಬಂಜೆತನ ಎನ್ನುವುದು ಚಿಕಿತ್ಸೆ ನೀಡಬಹುದಾದ ಮತ್ತೊಂದು ವಿಧದ ವೈದ್ಯಕೀಯ ಚಿಕಿತ್ಸೆಯಾಗಿದ್ದು, ಈ ಬಂಜೆತನ ತಜ್ಞರೊಂದಿಗೆ ಫಲಾನುಭವಿಗಳು ಉಚಿತ ಸಮಾಲೋಚನೆ ಮಾಡಬಹುದಾಗಿದೆ. ಬಂಜೆತನ ಸಮಸ್ಯೆಗಳನ್ನು ಎದುರಿಸುವವರು ಈ ಶಿಬಿರದಲ್ಲಿ ಪಾಲ್ಗೊಂಡು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.