ಮಂಗಳೂರು (ಬೆಂಗಳೂರು ) : ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಪದ್ಮನಾಭ ನಗರದ ಶಾಸಕ ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ.
ನ.17 ರಂದು ನಗರದ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಆರ್. ಅಶೋಕ್ ಹೆಸರನ್ನು ವಿಪಕ್ಷ ನಾಯಕನ ಸ್ಥಾನಕ್ಕೆ ಸೂಚಿಸಿದರೆ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅನುಮೋದಿಸಿದರು. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅಶೋಕ್ ಆಯ್ಕೆಯನ್ನು ಘೋಷಿಸಿದರು.