ಶಾಂತಿನಗರ ಶಾಲೆ: ದೀಪ ಸಂಭ್ರಮ, ಮಕ್ಕಳ ದಿನಾಚರಣೆ

0

ನೆಲ್ಯಾಡಿ: ಗೋಳಿತ್ತೊಟ್ಟು ಶಾಂತಿನಗರ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ದೀಪಾವಳಿ ಪ್ರಯುಕ್ತ ದೀಪ ಸಂಭ್ರಮ ಹಾಗೂ ಮಕ್ಕಳ ದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.
ಪೆರ್ಲ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರೂ, ಮೂಡಬಿದ್ರೆ ಆಳ್ವಾಸ್ ವಿದ್ಯಾಸಂಸ್ಥೆಯ ಉಪನ್ಯಾಸಕರೂ ಆದ ಅಜಿತ್‌ಕುಮಾರ್ ಪಾಲೇರಿಯವರು ಉದ್ಘಾಟಿಸಿ ಮಾತನಾಡಿ, ಶಾಲಾ ವಿದ್ಯಾರ್ಥಿಗಳಲ್ಲಿ ಕಲಿಕೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನು ಉಳಿಸುವ ಕೆಲಸವನ್ನು ಮಾಡುತ್ತಿರುವ ಶಾಂತಿನಗರ ಶಾಲೆಯ ಕಾರ್ಯ ಅತ್ಯದ್ಬುತವಾಗಿದೆ ಎಂದು ಹೇಳಿದರು.


ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪುರುಷೋತ್ತಮ ಪೂಜಾರಿ ಗುರುಂಪು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅಂಗನವಾಡಿ ಶಿಕ್ಷಕಿ ರೀತಾಕ್ಷಿ, ಎಸ್‌ಡಿಎಂಸಿ ಉಪಾಧ್ಯಕ್ಷೆ ಮೀನಾಕ್ಷಿ, ಸದಸ್ಯರಾದ ಸದಾನಂದ ಪೂಜಾರಿ ಕಿನ್ಯಡ್ಕ, ಶಿವಪ್ರಸಾದ್ ಶಾಂತಿನಗರ ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಪ್ರದೀಪ್ ಬಾಕಿಲ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ತಾರಾ ವಂದಿಸಿದರು. ಶಿಕ್ಷಕ ಮಂಜುನಾಥ ಮಣಕವಾಡ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಪ್ರಮೀಳಾ, ವೀಕ್ಷಿತಾ, ಸುನಂದ ಸಹಕರಿಸಿದರು. ವಿದ್ಯಾರ್ಥಿಗಳು, ಎಸ್‌ಡಿಎಂಸಿ ಸದಸ್ಯರು, ಪೋಷಕರು, ಊರವಿದ್ಯಾಭಿಮಾನಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ದೀಪಾವಳಿ ಪ್ರಯುಕ್ತ ಮಕ್ಕಳಿಗೆ ಗೂಡುದೀಪ ಹಾಗೂ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. 50 ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಅತ್ಯಾಕರ್ಷಕ ಗೂಡುದೀಪ ರಚಿಸಿ ಪ್ರದರ್ಶಿಸಿದರು. ಮಕ್ಕಳ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿ ಕವಿಗೋಷ್ಠಿ ಹಾಗೂ ಕಥಾಗೋಷ್ಠಿಯು ನಡೆಯಿತು.

LEAVE A REPLY

Please enter your comment!
Please enter your name here