ಕೊಡಿಮಾರು : ಗಣಪತಿ ಹೋಮ, ದುರ್ಗಾ ನಮಸ್ಕಾರ ಪೂಜೆ

0

ಕಾಣಿಯೂರು: ಬೆಳಂದೂರು ಗ್ರಾಮದ ಅಬೀರ ಕೊಡಿಮಾರು ಉಳ್ಳಾಕುಲು, ವ್ಯಾಘ್ರ ಚಾಮುಂಡಿ ಮತ್ತು ಪರಿವಾರ ಸಾನಿಧ್ಯಗಳ ದೈವಸ್ಥಾನದಲ್ಲಿ ಗಣಪತಿ ಹೋಮ, ಸಂಕ್ರಮಣ ಪೂಜೆ ಮತ್ತು ದುರ್ಗಾ ನಮಸ್ಕಾರ ಪೂಜೆ ನಡೆಯಿತು. ಅರ್ಚಕರಾದ ಶಿವರಾಮ ಉಪಾಧ್ಯಾಯ ಕಲ್ಪಡ ಮತ್ತು ಜಗನ್ನಾಥ ಉಪಾಧ್ಯಾಯ ಕಲ್ಪಡ ವೈದಿಕ ವಿಧಿ ವಿಧಾನಗಳನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ತರವಾಡು ಮನೆಯ ಕೃಷ್ಣಪ್ಪ ಗೌಡ ಕಂಡೂರು,ದೈವಸ್ಥಾನ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ತಿಮ್ಮಪ್ಪ ಗೌಡ ಕಾಯೆರ್ತಡಿ, ಅಧ್ಯಕ್ಷರಾದ ಉದಯ ರೈ ಮಾದೋಡಿ, ಕಾರ್ಯದರ್ಶಿ ಜಯಂತ ಅಬೀರ, ಕೋಶಾಧಿಕಾರಿ ಶೇಷಪ್ಪ ಅಬೀರ ಮತ್ತು ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here