ಸಹಕಾರ ಸಂಘ,ಹಾಲು ಉತ್ಪಾದಕರ ಸಹಕಾರ ಸಂಘದ ಸಿಬ್ಬಂದಿಗಳಿಗೆ ನೂತನ ಸೇವಾ ಭದ್ರತೆಯ ನಿಯಮ – ಸಹಕಾರ ಸಚಿವ ಕೆ.ಎನ್ ರಾಜಣ್ಣ

0

ಮಂಗಳೂರು: ರಾಜ್ಯದ ಎಲ್ಲಾ ಸಹಕಾರ ಸಂಘಗಳು ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಬ್ಬಂದಿಗಳಿಗೆ ನೂತನ ಸೇವಾ ಭದ್ರತೆ ನೀಡುವ ತಿದ್ದುಪಡಿ ಮಸೂದೆ ಶೀಘ್ರದಲ್ಲೇ ಜಾರಿಯಾಗಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ಎಸ್‌ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಸಹಕಾರಿ ಕ್ಷೇತ್ರದ ನಿಯಮ 128(ಎ)ಕ್ಕೆ ತಿದ್ದುಪಡಿ ತಂದು ಸಹಕಾರ ಕ್ಷೇತ್ರ ಮತ್ತು ಹಾಲು ಉತ್ಪಾದಕರ ಸಹಕಾರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸೇವಾ ಭದ್ರತೆ ದೊರೆಯಲಿದೆ.ಕಳೆದ ಹತ್ತು ವರ್ಷಗಳಿಂದ ಇರುವ ಕಾನೂನಿನಲ್ಲಿ ಬದಲಾವಣೆಯಾಗಲಿದೆ ಎಂದು ತಿಳಿಸಿದರು.
ಶೂನ್ಯ ಬಡ್ಡಿ ದರದಲ್ಲಿ ಸಾಲದ ಮಿತಿ 5 ಲಕ್ಷಕ್ಕೇರಿಕೆ: ರಾಜ್ಯದಲ್ಲಿ ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ನೀಡಲಾಗುವ ಸಾಲದ ಪ್ರಮಾಣವನ್ನು 3 ಲಕ್ಷದಿಂದ 5 ಲಕ್ಷ ರೂ.ಗಳಿಗೆ ಏರಿಸಲಾಗಿದೆ.ಶೇ.3ರ ಪ್ರಮಾಣದ ಮಧ್ಯಾವಧಿ ಸಾಲದ ಪ್ರಮಾಣವನ್ನು 15 ಲಕ್ಷ ರೂಪಾಯಿಗಳಿಗೆ ಏರಿಸಲಾಗಿದೆ ಎಂದು ರಾಜಣ್ಣ ತಿಳಿಸಿದರು. ರಾಜ್ಯದಲ್ಲಿ ಹೈನುಗಾರರ ಮೂಲಕ ಖರೀದಿಸುವ ಹಾಲಿಗೆ ಲೀಟರ್‌ಗೆ ರೂ.3 ಹೆಚ್ಚುವರಿ ನೀಡಲಾಗುತ್ತದೆ. ಆದರೆ ಗ್ರಾಹಕರಿಗೆ ನೀಡಲಾಗುವ ಹಾಲಿನ ದರ ಏರಿಕೆಯ ಪ್ರಸ್ತಾಪ ಇಲ್ಲ ಎಂದು ರಾಜಣ್ಣ ಹೇಳಿದರು. ಎಸ್‌ಸಿಡಿಸಿಸಿ ಬ್ಯಾಂಕ್ ರಾಜ್ಯದಲ್ಲಿ ಮುಂಚೂಣಿಯಲ್ಲಿದೆ ಎಂದು ರಾಜಣ್ಣ ತಿಳಿಸಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿದ್ದರು.

LEAVE A REPLY

Please enter your comment!
Please enter your name here