ಉಪ್ಪಿನಂಗಡಿ: ಅರಾಫ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

0

ಉಪ್ಪಿನಂಗಡಿ: ಅರಾಫ ಆಂಗ್ಲ ಮಾಧ್ಯಮ ಶಾಲೆ ಉಪ್ಪಿನಂಗಡಿ ಇಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.
ಶಾಲೆಯ ಅಧ್ಯಕ್ಷರಾದ ಕೆ.ಪಿ.ಎ ಸಿದ್ದೀಕ್‌ರವರು ಉದ್ಘಾಟಿಸಿದರು. ನಂತರ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ವಿನೋದಾವಳಿಗಳನ್ನು, ಮನೋರಂಜನೆಯ ಆಟಗಳನ್ನು ಶಿಕ್ಷಕರು ಏರ್ಪಡಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಕವಿತ ನವೀನ್‌ ಕುಲಾಲ್ ಅವರು ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು.

ವೇದಿಕೆಯಲ್ಲಿ ಶಾಲಾ ನಾಯಕಿಯಾದ ಹಿಬಾ ಫಾತಿಮ, ಉಪನಾಯಕಿ ಆಯಿಷಾ ನಿಶಾನ ಉಪಸ್ಥಿತರಿದ್ದರು. ನಂತರ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ನೀಡಲಾಯಿತು. ಬಹುಮಾನದ ವಿವರಣೆಯನ್ನು ಶಾಲಾ ಶಿಕ್ಷಕಿ ಸೌಮ್ಯರವರು ವಾಚಿಸಿದರು. ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಶಿಕ್ಷಕಿ ಪವಿತ್ರರವರು ನಿರೂಪಿಸಿದರು. ಶಿಕ್ಷಕ ಸಚಿನ್‌ರವರು ಸ್ವಾಗತಿಸಿದರು. ಶಿಕ್ಷಕಿ ಕೀರ್ತಿ ವಂದಿಸಿದರು. ಎಲ್ಲಾ ಶಿಕ್ಷಕರು ಸಹಕರಿಸಿದರು. ಕೊನೆಗೆ ಲಘು ಉಪಹಾರವನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು.

LEAVE A REPLY

Please enter your comment!
Please enter your name here