ಪುತ್ತೂರಿನ ಮೂವರು ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ ಪ್ರಕರಣ – ಮಂಗಳೂರಿನ ಯುವಕನೋರ್ವನನ್ನು ಬಂಧಿಸಿದ ಪುತ್ತೂರು ಪೊಲೀಸರು

0

ಪುತ್ತೂರು: ಪುತ್ತೂರಿನ ಮೂವರು ಅಪ್ರಾಪ್ತೆಯರಿಗೆ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಆರೋಪಿಯನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ.

ಮಂಗಳೂರು ಅಡ್ಯಾರುಪದವು ನಾರಾಯಣ ಪೂಜಾರಿ ಎಂಬವರ ಪುತ್ರ ಸಂತೋಷ್ ಯಾನೆ ರಿತಿಕ್ಷ್(25ವ) ಎಂಬವರು ಬಂಧಿತ ಆರೋಪಿ. ಆರೋಪಿ ಪುತ್ತೂರಿನ ಮೂವರು ಅಪ್ರಾಪ್ತೆಯರನ್ನು ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡು ಮೆಸೇಜ್ ಮತ್ತು ಕರೆ ಮಾಡಿ ಅವರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ.

ಈ ಕುರಿತು ನ.17ರಂದು ಸಂಜೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿ ತನಿಖೆ ನಡೆಸಿದರು. ನ.18ರಂದು ಆರೋಪಿಯನ್ನು ಮಂಗಳೂರಿನಿಂದ ಬಂಧಿಸಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಭಾರ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಇವರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

LEAVE A REPLY

Please enter your comment!
Please enter your name here