ನರಿಮೊಗರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ವಾರ್ಷಿಕ ಕ್ರೀಡಾಕೂಟವು ನ.18ರಂದು ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಿತು.ವಿದ್ಯಾರ್ಥಿಗಳು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ತಂಡವು ಘೋಷ್ ತಂಡದೊಂದಿಗೆ ನಡೆದ ಆಕರ್ಷಕ ಪಥ ಸಂಚಲನದಲ್ಲಿ ಅಧ್ಯಕ್ಷರು ಹಾಗೂ ಗೌರವಾನ್ವಿತರು ಗೌರವ ವಂದನೆ ಸ್ವೀಕರಿಸಿದರು.
ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕ್ರೀಡೆಯಲ್ಲಿ ಮಿಂಚಿದ ವಿದ್ಯಾರ್ಥಿಗಳಾದ ಗಗನ್ ಎಂ ಕುಲಾಲ್ 10ನೇ ತರಗತಿ, ಅಮನ್ ರಾಜ್ 10ನೇ ತರಗತಿ, ಪುಳಕಿತ 10ನೇ ತರಗತಿ, ನಿಖಿತಾ 10ನೇ ತರಗತಿ ರವರು ಕ್ರೀಡಾಜ್ಯೋತಿಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಜಯರಾಮ ಕೆದಿಲಾಯರಿಗೆ ಹಸ್ತಾಂತರಿಸಿದರು. ಬಳಿಕ ಕ್ರೀಡಾಜ್ಯೋತಿಯನ್ನು ಬೆಳಗಿಸಿ ಮಾತನಾಡಿದ ,ಜಯರಾಮ ಕೆದಿಲಾಯ ಅವರು,ಕ್ರೀಡೆಯಲ್ಲಿ ಆತ್ಮೀಯತೆ ಬೆಳಸಿಕೊಂಡು ವಿದ್ಯಾರ್ಥಿಗಳೇ ವಿದ್ಯಾರ್ಥಿಗಳನ್ನು ಪ್ರೋತ್ಸಾಹ ತುಂಬಬೇಕು ಎಂದರು. ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಮಾತನಾಡಿ, ಓದು ಮತ್ತು ಅಂಕ ಪಟ್ಟಿ ಹೊರತಾಗಿ ವಿದ್ಯಾರ್ಥಿ ಭವಿಷ್ಯ ರೂಪಿಸುವುದು ಕ್ರೀಡೆ. ಕ್ರೀಡೆ ಪದಕ ಗೆಲ್ಲುವುದಕ್ಕಾಗಿ ಮಾತ್ರ ಅಲ್ಲ, ಅದರಲ್ಲಿ ಭಾಗವಹಿಸುದು ಮುಖ್ಯ ಎಂದರು.
ಈ ಸಂದರ್ಭದಲ್ಲಿ ಸಂಚಾಲಕರಾದ ಭಾಸ್ಕರ್ ಆಚಾರ್ ಹಿಂದಾರ್, ಆಡಳಿತ ಮಂಡಳಿಯ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಕೆದಿಲಾಯ, ಆಡಳಿತ ಮಂಡಳಿಯ ಸದಸ್ಯರಾದ ನಿವೃತ ಶಿಕ್ಷಣಾಧಿಕಾರಿ ಎಸ್.ಜಿ ಕೃಷ್ಣ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಜಯಮಾಲಾ ವಿ ಎನ್ ಅವರು ಸ್ವಾಗತಿಸಿದರು. ಶಿಕ್ಷಕ ರವಿಶಂಕರ್ ವಂದಿಸಿದರು. ನಂತರ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆ ಗಳು ನಡೆಯಿತು. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.