ಕಂಬಳಬೆಟ್ಟು: ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ-ಮೂವರಿಗೆ ಗಂಭೀರ ಗಾಯ

0

ವಿಟ್ಲ: ಕಬಕ – ವಿಟ್ಲ ರಸ್ತೆಯ ಕಂಬಳಬೆಟ್ಟುವಿನಲ್ಲಿ ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಉರಿಮಜಲು ಸಮೀಪ ಸಿಮೆಂಟ್ ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಕೇರಳ ರಾಜ್ಯದ ಕೊಲ್ಲಂ ಮೂಲದ ದಿನೇಶ್, ಅಡ್ಯನಡ್ಕ ಮೂಲದ ಸತೀಶ್ ಹಾಗೂ ವಸಂತ್ ಗಾಯಗೊಂಡವರಾಗಿದ್ದಾರೆ. ಕಂಬಳಬೆಟ್ಟು ದರ್ಗಾ ಬಳಿಯಲ್ಲಿ ಅಪಘಾತ ಸಂಭವಿಸಿದೆ. ಘಟನೆ ನಡೆದ ಕೂಡಲೇ ರಸ್ತೆಯಲ್ಲಿ ಬಿದ್ದಿದ್ದ ಗಾಯಾಳುಗಳನ್ನು ಸ್ಥಳೀಯರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂವರು ಗಾಯಾಳುಗಳೂ ಗಂಭೀರ ಗಾಯಗೊಂಡಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಿಂದಾಗಿ ಎರಡೂ ವಾಹನಗಳು ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here