ನೆಕ್ಕಿತ್ತಡ್ಕ ದರ್ಗಾದ ಬೀಗ ಮುರಿದು ಕಳ್ಳತನ-ಸಿಸಿಟಿವಿಯಲ್ಲಿ ದಾಖಲಾದ ಕಳ್ಳರ ಕೈಚಳಕ

0

ಕಡಬ: ಕಡಬದ ಮರ್ದಾಳ ಸಮೀಪದ ನೆಕ್ಕಿತ್ತಡ್ಕ ದರ್ಗಾದ ಬೀಗ ಮುರಿದಿರುವ ಕಳ್ಳರು ಒಳಗಿದ್ದ ಹಣ ಕದ್ದು ಪರಾರಿಯಾಗಿರುವ ಘಟನೆ ನ.20ರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ನ.19ರ ತಡರಾತ್ರಿ 2.20ರ ಸುಮಾರಿಗೆ ಇಬ್ಬರು ಕಳ್ಳರು ಬಾಗಿಲಿನ ಬೀಗ ಮುರಿದು ಒಳ ನುಗ್ಗಿ ಹಣವನ್ನು ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ ವರ್ಷವೂ ಇದೇ ದರ್ಗಾದ ಬಾಗಿಲು ಮುರಿದು ಕಳ್ಳತನ ಮಾಡಲಾಗಿತ್ತು. ಆದರೆ ಇದುವರೆಗೂ ಕಳ್ಳರ ಪತ್ತೆಯಾಗಿಲ್ಲ. ಮತ್ತೆ ಕಳ್ಳತನವಾಗಿದ್ದು ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here