ಸೀನಿಯರ್ ನ್ಯಾಷನಲ್‌ ವೈಟ್‌ಲಿಫ್ಟಿಂಗ್‌ ಚಾಂಪಿಯನ್‌ ಶಿಪ್‌ ಗೆ ರಜತ್‌ ರೈ ಆಯ್ಕೆ

0

ಪುತ್ತೂರು: ಕರ್ನಾಟಕ ರಾಜ್ಯ ವೈಟ್‌ಲಿಫ್ಟಿಂಗ್‌ ಅಸೋಸಿಯೇಶನ್‌ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನ.18, 19ರಂದು ನಡೆದ ರಾಜ್ಯ ಸೀನಿಯರ್‌ ವೈಟ್‌ಲಿಫ್ಟಿಂಗ್‌ ಚಾಂಪಿಯನ್‌ ಶಿಪ್‌ ಸ್ಪರ್ಧೆಯಲ್ಲಿ ಪುತ್ತೂರಿನ ಇರ್ದೆ ನಿವಾಸಿ ರಜತ್‌ ರೈ 81 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಈ ಮೂಲಕ 2024ರ ಜನವರಿಯಲ್ಲಿ ಅರುಣಾಚಲ ಪ್ರದೇಶದಲ್ಲಿ ನಡೆಯಲಿರುವ ಸೀನಿಯರ್ ನ್ಯಾಷನಲ್‌ ವೈಟ್‌ಲಿಫ್ಟಿಂಗ್‌ ಚಾಂಪಿಯನ್‌ ಶಿಪ್‌ ಗೆ ಆಯ್ಕೆಯಾಗಿದ್ದಾರೆ. ರಜತ್‌ ರೈ ಸತತವಾಗಿ ಕಳೆದ 3 ವರ್ಷಗಳಿಂದ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here