ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ ರಸ್ತೆ ಬದಿಯಲ್ಲಿ ಬೆಳೆದಿರುವ ಕಾಡುಪೊದೆಗಳು ರಸ್ತೆಗಳನ್ನು ಆವರಿಸಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಸದ್ಯ ನೆಹರುನಗರದಲ್ಲಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಾರಾಡಿ ಬನ್ನೂರು, ಪಡೀಲ್ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದರಿಂದ ವಾಹನ ಸಂಚಾರರಿಗೆ ಮತ್ತು ಪಾದಚಾರಿಗಳಿಗೆ ಪೊದೆಗಳಿಂದಾಗಿ ತೊಂದರೆ ಆಗುತ್ತಿದೆ.
ರಸ್ತೆಯ ತಿರುವುಗಳಲ್ಲಿ ಸ್ಪಷ್ಟವಾಗಿ ಗೋಚರವಾಗದಿರುವುದರಿಂದ ಅಪಘಾತ ಸಂಭವಿಸುವ ಸಾಧ್ಯತೆ ಇದೆ. ರಸ್ತೆ ಬದಿಯ ಕಾಡು ಪೊದೆಗಳನ್ನು ಕಡಿದು ಸ್ವಚ್ಛ ಗೊಳಿಸಿ ಸಂಚಾರಕ್ಕೆ ಅಡಚಣೆಯಾಗದಂತೆ ಕ್ರಮ ಕೈಗೊಳ್ಳಬೇಕು ಇದರ ಬಗ್ಗೆ ನಗರಸಭೆ ಎಚ್ಚೆತ್ತುಕೊಳ್ಳಬೇಕಾಗಿ ಸಾರ್ವಜನಿಕ ವಲಯಲದಲ್ಲಿ ದೂರುಗಳು ಕೇಳಿ ಬರುತ್ತಿವೆ. ಇತ್ತೀಚೆಗೆ ನೆಹರುನಗರದಲ್ಲಿ ಮೇಲ್ಸೇತುವೆ ಕಾಮಗಾರಿ ಆರಂಭದ ಹಿನ್ನೆಲೆಯಲ್ಲಿ ರಸ್ತೆಯನ್ನು ಬಂದ್ ಮಾಡಲಾಗಿದ್ದು, ಬದಲಿ ರಸ್ತೆಯಾಗಿ ಹಾರಾಡಿ, ಬನ್ನೂರು, ಪಡೀಲ್ ರಸ್ತೆಯನ್ನು ವಾಹನ ಸವಾರರು ಬಳಲಸುತ್ತಿದ್ದಾರೆ. ಇದರಿಂದಾಗಿ ಈ ಭಾಗದ ರಸ್ತೆಯಲ್ಲಿ ಬೆಳಗ್ಗೆ ಮತ್ತು ಸಂಜೆ ತುಂಬಾ ವಾಹನ ದಟ್ಟಣೆ ಹೆಚ್ಚಾಗಿದ್ದು, ರಸ್ತೆ ಬದಿಯ ಪೊದೆಗಳಿಂದ ಸಂಚಾರಕ್ಕೆ ಅಡ್ಡಿಯಾಗುತಿದೆ. ಇದರ ಜೊತೆಗೆ ಪಾದಚಾರಿಗಳಿಗೂ ಅನೇಕ ತೊಂದರೆ ಉಂಟಾಗುತ್ತಿದೆ.