ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ ಸಂಬಂಧ ಹೋರಾಟ ಸಮಿತಿಯು ರಾಜ್ಯಸಭಾ ಸದಸ್ಯರಾದ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಬಿ.ಸಿ.ರೋಡ್ – ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ನೆಲ್ಯಾಡಿ ಪೇಟೆಯಲ್ಲಿ ತಡೆಗೋಡೆಯೊಂದಿಗೆ ಎತ್ತರಿಸಿದ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ನೆಲ್ಯಾಡಿಯಲ್ಲಿ ಜನ, ವಾಹನ ಸಂಚಾರ ಹೆಚ್ಚಾಗಿರುವುದರಿಂದ ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ಪ್ಲೈ ಓವರ್ ನಿರ್ಮಾಣ ಮಾಡಿಕೊಡುವಂತೆ ಸಂಬಂಧಪಟ್ಟವರಿಗೆ ತಿಳಿಸುವಂತೆ ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ ಸಲ್ಲಿಸಲಾಯಿತು.
ಸ್ಪಂದನೆ :
ಡಾ.ವೀರೇಂದ್ರ ಹೆಗ್ಗಡೆ ಅವರು ಈ ಬಗ್ಗೆ ಪ್ರತಿಕ್ರಿಯಿಸಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಗರಿ ಅವರಿಗೆ ಪತ್ರಮುಖೇನ ತಿಳಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ನೆಲ್ಯಾಡಿ-ಕೌಕ್ರಾಡಿ ಪೇಟೆ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷರಾದ ಎ.ಕೆ ವರ್ಗೀಸ್, ಕಾರ್ಯದರ್ಶಿ ಪ್ರಶಾಂತ್ ಸಿ.ಎಚ್, ಜೊತೆ ಕಾರ್ಯದರ್ಶಿ ಉಷಾ ಅಂಚನ್, ಕೋಶಾಧಿಕಾರಿ ಸತೀಶ್ ಭಟ್, ಸಮಿತಿಯ ಸದಸ್ಯರಾದ ವಿ.ಜೆ ಜೋಸೆಫ್, ರಫೀಕ್ ಸೀಗಲ್, ಇಬ್ರಾಹಿಂ ಎಂ.ಕೆ. ಉಪಸ್ಥಿತರಿದ್ದರು .