ತಾ.ಮಟ್ಟದ ಪ್ರತಿಭಾ ಕಾರಂಜಿ: ವಿವೇಕಾನಂದ ಆ.ಮಾ ಶಾಲೆಯ ವಿದ್ಯಾರ್ಥಿಗಳ ಸಾಧನೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಕೆಯ್ಯೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲಾಸಂಗಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿಯರಾದ ಕೀರ್ತನಾ ವರ್ಮ ( ಪ್ರತಾಪ್ ಸಿಂಹ ವರ್ಮ ಮತ್ತು ವೀಣಾ ಕುಮಾರಿ ಪುತ್ರಿ) ಭರತನಾಟ್ಯದಲ್ಲಿ ಪ್ರಥಮ ಸ್ಥಾನ, ಸುಪ್ರಜಾ ರಾವ್ ( ಉಪನ್ಯಾಸಕ ದಂಪತಿ ಪ್ರಶಾಂತ್ ರಾವ್ ಮತ್ತು ಸುಮನಾ.ಕೆ ಪುತ್ರಿ) ಜನಪದ ಗೀತೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ನಿಲಿಷ್ಕಾ ( ದಿನೇಶ್ ನಾಯ್ಕ್ ಮತ್ತು ಸ್ಮಿತಾಶ್ರೀ ಪುತ್ರಿ) ಚಿತ್ರಕಲೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here