![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
![](https://puttur.suddinews.com/wp-content/uploads/2023/11/prathiba-karanji-photo-2.png)
ಪುತ್ತೂರು: ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಇಂಡಿಯನ್ ಆಂಗ್ಲ ಮಾಧ್ಯಮ ಶಾಲೆ ಉಪ್ಪಿನಂಗಡಿ ಶಾಲೆಯ ನಜ್ಮುನ್ ನಿಶಾ (3ನೇ ತರಗತಿ) ಕಿರಿಯ ವಿಭಾಗದ ಧಾರ್ಮಿಕ ಅರೆಬಿಕ್ ಪಠಣದಲ್ಲಿ ಪ್ರಥಮ ಸ್ಥಾ, ಅನ್ಹಲ (4ನೇ ತರಗತಿ) ಕಿರಿಯ ವಿಭಾಗದ ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ ಮುಹಮ್ಮದ್ ಹಫೀಝ್ (4ನೇ ತರಗತಿ) ಕಿರಿಯ ವಿಭಾಗದ ಕಥೆ ಹೇಳುವ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆ.
ಕಿರಿಯರ ಪ್ರಾಥಮಿಕ ವಿಭಾಗದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಕೂಡಾ ಪಡೆದುಕೊಂಡಿದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.