ಅಳಿಕೆ ಗ್ರಾಮ ಪಂಚಾಯತ್ ಬಾಪೂಜಿ ಸಭಾಭವನದಲ್ಲಿ ವಲಯ ಮಟ್ಟದ ಮಕ್ಕಳ ದಿನಾಚರಣೆ

0

ವಿಟ್ಲ: ಅಳಿಕೆ ಗ್ರಾಮ ಪಂಚಾಯತ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ ಇದರ ಜಂಟಿ ಆಶ್ರಯದಲ್ಲಿ ವಲಯ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಮತ್ತು ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನ.೨೧ರಂದು ಅಳಿಕೆ ಗ್ರಾಮ ಪಂಚಾಯತ್ ಬಾಪೂಜಿ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿರವರು ಉದ್ಘಾಟಿಸಿದರು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನೋಡಲ್ ಅಧಿಕಾರಿ ರಶ್ಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಳಿಕೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜಯಪ್ರಕಾಶ್, ಅಳಿಕೆ ವಾಣಿವಿಹಾರದ ಶ್ರೀ ಸತ್ಯಸಾಯಿ ಲೋಕಸೇವಾ ಶಾಲೆಯ ಮುಖ್ಯೋಪಾಧ್ಯಾಯ ಈಶ್ವರನಾಯ್ಕ, ವಿಟ್ಲ ಶಿಶು ಆಭಿವೃದ್ದಿ ಯೋಜನಾಧಿಕಾರಿ ಉಷಾ,
ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಪದ್ಮನಾಭ ಪೂಜಾರಿ ಹೆಚ್., ಉಪಾಧ್ಯಕ್ಷ ಸರೋಜಿನಿ, ಅಭಿವೃದ್ಧಿ ಅಧಿಕಾರಿ ದನಂಜಯ, ಸದಸ್ಯರಾದ ಸೀತಾರಾಮ ಶೆಟ್ಟಿ, ಜಗದೀಶ್ ಶೆಟ್ಟಿ, ಸರಸ್ವತಿ, ಕಾನ ಈಶ್ವರ ಭಟ್, ಬಬಿತ, ಶಶಿಕಲ, ಶಾಂಭವಿ, ರವೀಶ, ಗಿರಿಜ, ಭಾಗೀರತಿ, ಸುಕುಮಾರ, ಸೆಲ್ವಿನಾ ಡಿಸೋಝ ಮೊದಲಾದವರು ಉಪಸ್ಥಿತರಿದ್ದರು.

ಗ್ರಾ.ಪಂ. ಸದಸ್ಯ ಸದಾಶಿವ ಶೆಟ್ಟಿ ಸ್ವಾಗತಿಸಿದರು. ವಲಯ ಮೇಲ್ವಿಚಾರಕಿ ರೋಹಿಣಿ ಕಾರ್ಯಕ್ರಮ ನಿರೂಪಿಸಿದರು. ಎರುಂಬು ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ಸರಿತ ವಂದಿಸಿದರು.

LEAVE A REPLY

Please enter your comment!
Please enter your name here