ಕಾವು:ವಿಶ್ವ ಹಿಂದೂ ಪರಿಷತ್- ಬಜರಂಗದಳ ಕಾವು ಘಟಕ ಹಾಗೂ ಗೋಪೂಜಾ ಸಮಿತಿ ಕಾವು ಇದರ ನೇತೃತ್ವದಲ್ಲಿ 12ನೇ ವರ್ಷದ ಸಾಮೂಹಿಕ ಗೋಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನ 25 ರಂದು ಸಂಜೆ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.
ಸಾಮೂಹಿಕ ಗೋಪೂಜೆ -ಭಜನಾ ಕಾರ್ಯಕ್ರಮ:
ಸಂಜೆ ಗಂಟೆ 4.30 ರಿಂದ ವಿವಿಧ ಭಜನಾ ತಂಡಗಳಿಂದ ಭಜನ ಕಾರ್ಯಕ್ರಮ ನಡೆಯಲಿದ್ದು,ಸಂಜೆ ಗಂಟೆ 6.30 ರಿಂದ ಸಾಮೂಹಿಕ ಗೋಪೂಜೆ ಕಾರ್ಯಕ್ರಮ ನಡೆಯಲಿದೆ.
ಧಾರ್ಮಿಕ ಸಭಾ ಕಾರ್ಯಕ್ರಮ
ಸಂಜೆ ಗಂಟೆ 7 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಗೋಪೂಜಾ ಸಮಿತಿ ಕಾವು ಇದರ ಅಧ್ಯಕ್ಷರಾದ ನಹುಷ ಭಟ್ ಪಳನೀರು ಸಭಾಧ್ಯಕ್ಷತೆ ವಹಿಸಿದ್ದಾರೆ. ಪೂರ್ಣತ್ಮರಾಮ್ ಈಶ್ವರಮಂಗಲ ಧಾರ್ಮಿಕ ಭಾಷಣ ಮಾಡಲಿದ್ದು ಮುಖ್ಯ ಅತಿಥಿಗಳಾಗಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ರಾವ್ ನಿಧಿಮುಂಡ, ವಿಶ್ವ ಹಿಂದೂ ಪರಿಷತ್ ಕಾವು ಘಟಕದ ಅಧ್ಯಕ್ಷರು ಭಾಸ್ಕರ ಬಲ್ಯಾಯ ಕಾವು,ಬಜರಂಗದಳ ಕಾವು ಘಟಕದ ಸಂಚಾಲಕರು ಕಿರಣ್ ಕುಮಾರ್ ಭಾಗವಹಿಸಲಿದ್ದಾರೆ.
ಈ ಎಲ್ಲಾ ಕಾರ್ಯಕ್ರಮದಲ್ಲಿ ಹಿಂದೂ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಗೋಪೂಜಾ ಸಮಿತಿ ಅಧ್ಯಕ್ಷರಾದ ನಹುಷಾ ಭಟ್ ಪಳನೀರು ಹಾಗೂ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಕಾವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ