ಪುತ್ತೂರು:ಮಂಗಳೂರು ವಿದ್ಯುಚ್ಚಕ್ತಿ ಸರಬರಾಜು ಕಂಪನಿ(ಮೆಸ್ಕಾಂ)ಸೇರಿದಂತೆ ರಾಜ್ಯದ 5 ಎಸ್ಕಾಂಗಳ ವ್ಯಾಪ್ತಿಯಲ್ಲಿ ನ.24ರಿಂದ 26ರ ತನಕ ವಿದ್ಯುತ್ ಬಿಲ್ ಪಾವತಿ ಸೇರಿದಂತೆ ಎಲ್ಲಾ ಆನ್‌ಲೈನ್ ಸೇವೆಗಳು ಸ್ಥಗಿತಗೊಳ್ಳಲಿದೆ.
ಮೆಸ್ಕಾಂ ವ್ಯಾಪ್ತಿಯ ಬಂಟ್ವಾಳ. ಕಡೂರು, ಪುತ್ತೂರು, ತರಿಕೆರೆ, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರು ಸೇರಿದಂತೆ ಬೆಸ್ಕಾಂ, ಚೆಸ್ಕಾಂ, ಜೆಸ್ಕಾಂ ಹಾಗೂ ಹೆಸ್ಕಾಂ ಮಾಹಿತಿ ತಂತ್ರಜ್ಞಾನ ಸೇವೆಗಳಿಗೆ ಸಂಬಂಧಿಸಿದ ತಂತ್ರಾಂಶಗಳು ಹಾಗೂ ಹಾರ್ಡ್‌ವೇರ್‌ಗಳನ್ನು ಉನ್ನತ ಮಟ್ಟಕ್ಕೇರಿಸುತ್ತಿರುವ ಹಿನ್ನೆಲೆಯಲ್ಲಿ ಮಾಹಿತಿ ತಂತ್ರಜ್ಞಾನ ಆಧಾರಿತ ವಿದ್ಯುತ್ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.ಈ ಅವಧಿಯಲ್ಲಿ ಆನ್‌ಲೈನ್ ಸೇವೆಗಳಾದ ಹೊಸವಿದ್ಯುತ್ ಸಂಪರ್ಕ, ಹೆಸರು/ಲೋಡ್ ಬದಲಾವಣೆ, ನಗದು ಪಾವತಿ, ಆನ್‌ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿ ಹಾಗೂ ಇತರ ಸೇವೆಗಳು ಲಭ್ಯವಿರುವುದಿಲ್ಲ.ಗ್ರಾಹಕರು ಹಾಗೂ ಗುತ್ತಿಗೆದಾರರು ತಮ್ಮ ಅಗತ್ಯತೆಗಳನ್ನು ಮುಂಚಿತವಾಗಿ ರೂಪಿಸಿಕೊಳ್ಳುವಂತೆ ಎಸ್ಕಾಂಗಳು ತಿಳಿಸಿವೆ.ಈ ಅವಽಯಲ್ಲಿ ವಿದ್ಯುತ್ ಸರಬರಾಜು ಸೇವೆಗಳಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದೂ ಸ್ಪಷ್ಟಪಡಿಸಲಾಗಿದೆ.