ಕಬಡ್ಡಿ ಪಂದ್ಯಾಟ: ದರ್ಬೆ ಲಿಟ್ಲ್ ಫ್ಲವರ್ ಶಾಲಾ ಬಾಲಕಿಯರ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ಪುತ್ತೂರು:ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ರಾಜ್ಯ ಮಟ್ಟದ ಪ್ರಾಥಮಿಕ ಶಾಲಾ ಕಬಡ್ಡಿ ಪಂದ್ಯಾಟದಲ್ಲಿ ದರ್ಬೆ ಲಿಟ್ಲ್ ಫ್ಲವರ್ ಶಾಲಾ ಬಾಲಕಿಯರ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ.


ಕಳೆದ ಬಾರಿಯ ಶೈಕ್ಷಣಿಕ ಸಾಲಿನ ಕಬಡ್ಡಿ ಪಂದ್ಯಾಟದಲ್ಲಿ ಶಾಲೆಯಿಂದ ಓರ್ವ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದರು. ಈ ಸಾಲಿನ ಪಂದ್ಯಾಟದಲ್ಲಿ ಶಾಲಾ ಬಾಲಕಿಯರ ಪೂರ್ಣ ಪ್ರಮಾಣದ ತಂಡವು ಮೈಸೂರು ವಿಭಾಗ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು ತನ್ನ ಮುಡಿಗೇರಿಸಿಕೊಂಡು ಇದೀಗ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು ಪುತ್ತೂರಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಮಿಂಚಿದ್ದಾರೆ. ಚತ್ತೀಸ್‌ಗಡದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ.
ವಿದ್ಯಾರ್ಥಿಗಳಾದ ಜುವೆನ್ನಾ ಡಾಝಲ್ ಕುಟಿನ್ಹಾ, ಸನ್ನಿಧಿ, ಹಾರ್ದಿಕಾ, ಧನ್ವಿ, ಜಸ್ಮಿತಾ, ಸುಶ್ರಾವ್ಯ, ವಿಜೇತ, ಹರ್ಷಿಣಿ, ದೀಕ್ಷಾ, ಶಾಹಿದಾ, ಲಕ್ಷ್ಯ, ದರ್ಶಿಣಿ, ಗಗನ ಹಾಗೂ ಜೆನಿಟಾ ಸಿಂಧು ಪಸನ್ನ ಹಾಗೂ ಕೃತಿಕಾ ತಂಡದಲ್ಲಿದ್ದರು. ಮುಖ್ಯ ಶಿಕ್ಷಕಿ ಭಗಿನ ವೆನಿಶಾ ಬಿ.ಎಸ್ ಮಾರ್ಗದರ್ಶನದಲ್ಲಿ ಸಹ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಹಾಗೂ ಮಹಮ್ಮದ್ ಹಬೀಬ್, ಶಿಲ್ಪಾ ಡಿ ಸೋಜ, ಸುಚೇತ್ ದುರ್ಗಾನಗರ ತರಬೇತಿ ನೀಡಿರುತ್ತಾರೆ. ವಿಜೇತರನ್ನು ಶಾಲಾ ಆಡಳಿತ ಮಂಡಳಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here