ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಕೆಯ್ಯೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಸಹಯೋಗದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲಾಸಂಗಮ-2023 ರಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳ ತಂಡ ಪ್ರಥಮ ಸಮಗ್ರ ಪ್ರಶಸ್ತಿ ಮತ್ತು ಕಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳ ತಂಡ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಕಿರಿಯ ಪ್ರಾಥಮಿಕ ವಿಭಾಗದಲ್ಲಿ 4ನೇ ತರಗತಿಯ ಆರಾಧ್ಯಕೃಷ್ಣ ಕಥೆ ಹೇಳುವುದು ಪ್ರಥಮಸ್ಥಾನ ಮತ್ತು 4ನೇ ತರಗತಿಯ ಅದ್ವಿತ್ ರಾವ್ ಆಶುಭಾಷಣದಲ್ಲಿ ದ್ವಿತೀಯ ಸ್ಥಾನ ಪಡೆದು, ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.ಹಿರಿಯ ಪ್ರಾಥಮಿಕ ವಿಭಾಗದಲ್ಲಿ 7ನೇ ತರಗತಿಯ ದೀಪ್ತಿ ಕುಬಣೂರಾಯ ಹಿಂದಿ ಕಂಠಪಾಠದಲ್ಲಿ ಪ್ರಥಮ ಸ್ಥಾನ, 7ನೇ ತರಗತಿಯ ನಾಗಾಭೂಷಣ ಕಿಣಿ ಸಂಸ್ಕೃತ ಧಾರ್ಮಿಕ ಪಠಣದಲ್ಲಿ ಪ್ರಥಮ ಸ್ಥಾನ, 7ನೇ ತರಗತಿಯ ಸಿರಿ ಹಿಳ್ಳೆಮನೆ ಭಕ್ತಿಗೀತೆಯಲ್ಲಿ ಪ್ರಥಮ ಸ್ಥಾನ, 7ನೇ ತರಗತಿಯ ಅವನಿ.ಎಸ್.ವಿ ಲಘು ಸಂಗೀತದಲ್ಲಿ ಪ್ರಥಮ ಸ್ಥಾನ ಪಡೆದು, ಪ್ರಥಮ ಸಮಗ್ರ ಪ್ರಶಸ್ತಿಯೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.