ಪುತ್ತೂರು: ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿರ್ದೇಶನದಂತೆ ಪ್ಯಾನ್ ಇಂಡಿಯಾ ರಕ್ಷಣಾ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ನ.24ರಂದು ಕಾರ್ಮಿಕ ಇಲಾಖೆಯ ವತಿಯಿಂದ ಪುತ್ತೂರು ಮತ್ತು ಉಪ್ಪಿನಂಗಡಿ ಪ್ರದೇಶಗಳಲ್ಲಿ ಕಾರ್ಮಿಕ ಇಲಾಖೆಯ ಹಿರಿಯ ಕಾರ್ಮಿಕ ನಿರೀಕ್ಷಕ ಗಣಪತಿ ಹೆಗಡೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಶ್ರೀನಿವಾಸ, ವಜೀರ್ ಅಹಮದ್, ಮಕ್ಕಳಾ ರಕ್ಷಣಾ ಘಟಕ ಹಾಗೂ ಇತರೆ ಇಲಾಖೆಗಳ ಸಹಕಾರದೊಂದಿಗೆ ವಿವಿಧ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪುತ್ತೂರು ಹಾಗೂ ಉಪ್ಪಿನಂಗಡಿಯ ಸುಮಾರು 50ಕ್ಕೂ ಅಧಿಕ ಅಂಗಡಿ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ & ನಿಯಂತ್ರಣ) ಕಾಯ್ದೆ 1986 ರ ಬಗ್ಗೆ ಸ್ಟಿಕ್ಕರ್ ಮತ್ತು ಕರಪತ್ರಗಳನ್ನು ಅಂಟಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.