ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಗೆ ದಿನಾಂಕ ಪ್ರಕಟ

0

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಚುನಾವಣೆ ಘೋಷಣೆಯಾಗಿದೆ.
ಒಟ್ಟು 12 ಸ್ಥಾನಗಳನ್ನು ಹೊಂದಿರುವ ನರಿಮೊಗರು ಪ್ರಾ.ಕೃ.ಪ.ಸಹಕಾರಿ ಸಂಘದ ಚುನಾವಣೆಗೆ ಸಾಮಾನ್ಯ ಸ್ಥಾನ-5, ಪರಿಶಿಷ್ಟ ಜಾತಿ ಮೀಸಲು ಸ್ಥಾನ-1, ಪರಿಶಿಷ್ಟ ಪಂಗಡ ಮೀಸಲು ಸ್ಥಾನ-1, ಹಿಂದುಳಿದ ವರ್ಗ ಪ್ರವರ್ಗ ಮೀಸಲು ಸ್ಥಾನ-1, ಹಿಂದುಳಿದ ವರ್ಗ ಪ್ರವರ್ಗ ಬಿ ಮೀಸಲು ಸ್ಥಾನ-1, ಮಹಿಳಾ ಮೀಸಲು ಸ್ಥಾನ-2 ಹಾಗೂ ಸಾಲಗಾರರಲ್ಲದ ಕ್ಷೇತ್ರ-1 ಮೊದಲಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.


ನ.28ರಂದು ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದ್ದು ಡಿ.2 ನಾಮಪತ್ರ ಸಲ್ಲಿಸಲು ಕಡೇಯ ದಿನವಾಗಿರುತ್ತದೆ. ಡಿ.3ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ಅದೇ ದಿನ ಪರಿಶೀಲನೆಯ ನಂತರ ಅಭ್ಯರ್ಥಿಗಳ ಪಟ್ಟಿಯ ಪ್ರಕಟನೆ ನಡೆಯಲಿದೆ.
ಡಿ.4 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು ಅಂದೇ ಸಿಂಧುತ್ವ ಹೊಂದಿರುವ ಅಭ್ಯರ್ಥಿಗಳ ಪಟ್ಟಿಯ ಪ್ರಕಟನೆ ನಡೆಯಲಿದೆ. ಆ ನಂತರ ಅಭ್ಯರ್ಥಿಗಳಿಗೆ ಚಿಹ್ನೆಗಳನ್ನು ಹಂಚಿಕೆ ಮಾಡಲಾಗುತ್ತದೆ.ಡಿ.6ರಂದು ಸಿಂಧುತ್ವ ಹೊಂದಿರುವ ಉಮೇದುವಾರರ ಪಟ್ಟಿಯನ್ನು ಚಿಹ್ನೆಯೊಂದಿಗೆ ಪ್ರಕಟಿಸಲಾಗುತ್ತದೆ.

ಡಿ.10ರಂದು ನರಿಮೊಗರು ಪ್ರಾ.ಕೃ.ಪ.ಸಹಕಾರ ಸಂಘದ ವಠಾರದಲ್ಲಿ ಚುನಾವಣೆ ನಡೆಯಲಿದ್ದು ಅಂದೇ ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ ಎಂದು ರಿಟರ್ನಿಂಗ್ ಅಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here