ರಾಮಕುಂಜ: ಶಾಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮ ನಿರಂತರವಾದಾಗ ಸಮಾಜದೊಟ್ಟಿಗಿನ ಶಾಲಾ ಬಾಂಧವ್ಯ ಗಟ್ಟಿಯಾಗುತ್ತದೆ. ಆ ಮೂಲಕ ಶಾಲಾ ಅಭಿವೃದ್ದಿಗೂ ಸಹಕಾರಿಯಾಗುತ್ತದೆ. ಮಾನಸಿಕ ದೈಹಿಕ ಕ್ಷಮತೆಗೆ ಪೂರಕವಾಗಿರುವ ಕ್ರೀಡೆಯಲ್ಲಿ ವಯಸ್ಸಿನ ಮಿತಿಯಿಲ್ಲದೆ ಎಲ್ಲರೂ ಭಾಗವಹಿಸಬಹುದು ಎಂದು ಪಡ್ಪಿನಂಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಸರೋಜಿನಿ ಕೆಮ್ಮೂರು ಹೇಳಿದರು.
ಅವರು ಕೊಯಿಲ ಗ್ರಾಮದ ಸಬಳೂರು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಅಂಗವಾಗಿ ಹಿರಿಯ ವಿದ್ಯಾರ್ಥಿಗಳಿಗೆ, ಪೋಷಕರಿಗೆ, ಶಿಕ್ಷಣ ಪ್ರೇಮಿಗಳಿಗೆ ಆಯೋಜಿಸಲಾದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಬಾಲಕೃಷ್ಣ ಸುವರ್ಣ, ಹಿರಿಯರಾದ ಲಿಂಗಪ್ಪ ಗೌಡ ಕಡೆಂಬ್ಯಾಲು ಶುಭಹಾರೈಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಎರ್ಮಡ್ಕ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶೇಖರ ಗೌಡ ಕೊಲ್ಯ, ಶಾಲಾ ಮುಖ್ಯಗುರು ವಾರಿಜಾ ಬಿ, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಇಸ್ಮಾಯಿಲ್, ಕಾರ್ಯದರ್ಶಿ ನಾಗೇಶ್ ಕಡೆಂಬ್ಯಾಲು ಉಪಸ್ಥಿತರಿದ್ದರು. ಹಿರಿಯ ವಿದ್ಯಾರ್ಥಿಗಳಾದ ಡಿಸಿಎಮ್ ಶಿಕ್ಷಣದಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ರ‍್ಯಾಂಕ್ ಪಡೆದ ಚೈತ್ರ ಓಕೆ, ಕಬಡ್ಡಿಯಲ್ಲಿ ಸಾಧನೆಗೈದ ದಿಲೀಪ್ ಕೊಲ್ಯ, ದಾನಿ ರಮಿತಾಸುಂದರ ನಾಯ್ಕ ಚೆಕ್ಕಿತ್ತಡ್ಕ ಅವರನ್ನು ಗೌರವಿಸಲಾಯಿತು. ಶಿಕ್ಷಕ ಶೇಖರ ಬಲ್ಯ ಸ್ವಾಗತಿಸಿದರು. ಶಿಕ್ಷಕ ಪರಮೇಶ್ವರ ಗೌಡ ಸಬಳೂರು ವಂದಿಸಿದರು. ಶಿಕ್ಷಕ ವೆಂಕಟೇಶ್ ನಿರೂಪಿಸಿದರು.