





ಪುತ್ತೂರು: ಪಿಕಪ್ ವಾಹನ ಹಾಗೂ ಆಕ್ಟೀವಾ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ನ.24ರಂದು ಸಂಜೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಇಳಂತಿಲ ನಿವಾಸಿ ಮಹಮ್ಮದ್ ಮುನ್ನಾವರ್ (25ವ.) ಎಂಬವರು ಗಾಯಗೊಂಡಿದ್ದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. 


ಇವರು ಚಲಾಯಿಸುತ್ತಿದ್ದ ಆಕ್ಟೀವಾಗೆ (ಕೆಎ21 ಎಕ್ಸ್ 4049)ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯ ಎದುರು ಉಪ್ಪಿನಂಗಡಿ ಮಾರ್ಕೆಟ್ ರಸ್ತೆಯಿಂದ ಉಪ್ಪಿನಂಗಡಿ-ಗುರುವಾಯನಕೆರೆ ರಾಜ್ಯ ಹೆದ್ದಾರಿಗೆ ಪಿಕಪ್ ವಾಹನ(ಕೆಎ 21, ಎ 5077)ವನ್ನು ಅದರ ಚಾಲಕ ನವೀನ್ ಎಂಬವರು ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಡಿಕ್ಕಿಯಾಗಿದೆ. ಆಕ್ಟೀವಾಗೆ ಡಿಕ್ಕಿಯಾದ ಪಿಕಪ್ ನಂತರ ರಸ್ತೆ ಬದಿ ನಿಂತುಕೊಂಡಿದ್ದ ಕೇಶವ ಎಂಬವರಿಗೂ ಡಿಕ್ಕಿಯಾಗಿದೆ. ಘಟನೆಯಲ್ಲಿ ಸ್ಕೂಟರ್ ಸವಾರ ಮಹಮ್ಮದ್ ಮುನ್ನಾವರ್ ಅವರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಈ ಬಗ್ಗೆ ಮಹಮ್ಮದ್ ಅವರು ನೀಡಿದ ದೂರಿನಂತೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ 157/2023 ಕಲಂ: 279, 337 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.







 
            