ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ರಾಮಕುಂಜೇಶ್ವರ ಪ್ರೌಢ ಶಾಲೆಗೆ ಬಹುಮಾನ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇವರ ಆಶ್ರಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿಯ ಅನುಶ್ರೀ ಉಡುಪ ಸಂಸ್ಕೃತ ಭಾಷಣದಲ್ಲಿ ತೃತೀಯ ಸ್ಥಾನ ಹಾಗೂ 9ನೇ ತರಗತಿಯ ಜ್ಯೋತಿ ಹಿಂದಿ ಭಾಷಣದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.

ತಂಡದ ಸಂಪೂರ್ಣ ಜವಾಬ್ದಾರಿಯನ್ನು ಶಾಲಾ ಹಿರಿಯ ಶಿಕ್ಷಕರಾದ ವೆಂಕಟೇಶ ದಾಮ್ಲೆ ಹಾಗೂ ಅನುಷಾ ವಹಿಸಿದ್ದರು. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಮುಖ್ಯಗುರು ಸತೀಶ್ ಭಟ್ ಹಾಗೂ ಶಾಲಾ ಶಿಕ್ಷಕರು ಮತ್ತು ಆಡಳಿತ ಮಂಡಳಿಯವರು ಸಹಕರಿಸಿದ್ದರು.

LEAVE A REPLY

Please enter your comment!
Please enter your name here