ವಿಟ್ಲ: ವಿಟ್ಲ ಜೇಸಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ‘ಜೇಸಿ ಕಲರವʼ ನ.26ರಂದು ಶಾಲಾ ಸಭಾ ಭವನದಲ್ಲಿ ನಡೆಯಿತು.
ಶಾಲಾ ವಿದ್ಯಾರ್ಥಿ ನಾಯಕಿ ಸೃಜನಾ ಎಸ್ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಹಳೆ ವಿದ್ಯಾರ್ಥಿನಿ ಶ್ರುತಿ, ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿನಿ ನಿವೇದ್ಯಾ ಗಣೇಶ್, ಜೇಸಿ ಆಂಗ್ಲ ಮಾದ್ಯಮ ಶಾಲೆ ಆಡಳಿತ ಮಂಡಳಿಯ ಅಧ್ಯಕ್ಷ ಎಲ್. ಎನ್. ಕೂಡೂರು, ಉಪಾಧ್ಯಕ್ಷ ಶ್ರೀಧರ ಶೆಟ್ಟಿ, ಕೋಶಾಧಿಕಾರಿ ಪ್ರಭಾಕರ ಶೆಟ್ಟಿ, ಜತೆ ಕಾರ್ಯದರ್ಶಿ ಶ್ರೀಪ್ರಕಾಶ ಕುಕ್ಕಿಲ, ನಿರ್ದೇಶಕರಾದ ಮೋನಪ್ಪ ಶೆಟ್ಟಿ, ಹಸನ್ ವಿಟ್ಲ, ಗೋಕುಲ್ ಶೇಟ್, ಪರಮೇಶ್ವರ ಹೆಗಡೆ ಆಡಳಿತಾಧಿಕಾರಿ ರಾಧಾಕೃಷ್ಣ ಎರುಂಬು, ಉಪಾಪ್ರಾಂಶುಪಾಲೆ ಜ್ಯೋತಿ ಶೆಣೈ ಉಪಸ್ಥಿತರಿದ್ದರು.
ಹಲವು ವರ್ಷ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು ಪ್ರಸ್ತುತ ಸರಕಾರಿ ಶಾಲೆ ಶಿಕ್ಷಕಿಯಾಗಿ ಸೇರ್ಪಡೆಯಾದ ಗೀತಾ ರವರನ್ನು ಸನ್ಮಾನಿಸಲಾಯಿತು.
ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ವಿಟ್ಲ ವಲಯ ಮೇಲ್ವಿಚಾರಕಿ ವನಿತಾರವರನ್ನು ಗೌರವಿಸಲಾಯಿತು. ದಿಯಾ ಸ್ವಾಗತಿಸಿದರು.
ಪ್ರಾಂಶುಪಾಲ ಜಯರಾಮ ರೈ ವಾರ್ಷಿಕ ವರದಿ ಮಂಡಿಸಿದರು. ವಂದ್ಯಾ ವಂದಿಸಿದರು. ಮನೋನ್ಮಯಿ, ವೃದ್ಧಿ, ಕೇಶವ ಶ್ರವಣ, ಅನನ್ಯಾ ರೈ ರಕ್ಷಾ ,ಸಾತ್ವಿಕ್ ಚೈತನ್ಯಾ ಪ್ರತಿಭಾ ಪುರಸ್ಕೃತರ ಪಟ್ಟಿ ವಾಚಿಸಿದರು. ವಂದ್ಯಾ, ಅವನಿ ಜಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮಕ್ಕಳಿಂದ ಸುದರ್ಶನ ವಿಜಯ ಯಕ್ಷಗಾನ ಪ್ರದರ್ಶನ ನಡೆಯಿತು.ಪೂರ್ವಾಹ್ನ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಬಹುಮಾನ ವಿತರಣೆ ನಡೆಯಿತು.
ಜೇಸಿ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಮೋಹನ ಎ. ವಂದಿಸಿದರು.