ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜು, ಪ್ರೌಢಶಾಲೆಯಲ್ಲಿ ಸಂವಿಧಾನ ದಿನ

0

ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜು,ಪ್ರೌಢಶಾಲೆಯಲ್ಲಿ ಸಂವಿಧಾನ ದಿನದ ಆಚರಣೆಯು ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಉಪನ್ಯಾಸಕ ಗುಡ್ಡಪ್ಪ ಬಲ್ಯ ಇವರು “ವಿಶ್ವದ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತವು ವ್ಯವಸ್ಥಿತವಾಗಿ ನಡೆಯಲು ಕಾರಣ ಯಾವುದೆಂದರೆ ಅದುವೇ ನಮ್ಮ ಸಂವಿಧಾನ.1949ರ ನವೆಂಬರ್ 26ರಂದು ಭಾರತದ ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಹಾಗಾಗಿ ನಾವು ಸಂವಿಧಾನ ದಿನವನ್ನು ಆಚರಿಸುತ್ತಿದ್ದೇವೆ. ನಾವೆಲ್ಲರೂ ಈದಿನ ಸಂವಿಧಾನದ ಪೀಠಿಕೆಯನ್ನು ಓದುವುದರ ಮೂಲಕ, ಅದರ ಭಾವವನ್ನು ತಿಳಿದು, ಈ ದಿನದ ಪ್ರಾಮುಖ್ಯತೆಯನ್ನು ಅರಿಯಬೇಕು.”ಎಂದು ಹೇಳಿದರು.

ಆ ನಂತರ ಸಂವಿಧಾನದ ಪೀಠಿಕೆಯನ್ನು ಪಠಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ವಸಂತ ಕುಮಾರ್, ಮುಖ್ಯಗುರು ಸತೀಶ್ ಭಟ್, ಅಧ್ಯಾಪಕ-ಅಧ್ಯಾಪಕೇತರ ವರ್ಗದವರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here