ನೆಲ್ಯಾಡಿ: ನಾಡಿನಲ್ಲಿ ಸೆರೆಯಾದ ಕಾಳಿಂಗ ಸರ್ಪ ಕಾಡಿಗೆ

0

ಉಪ್ಪಿನಂಗಡಿ: ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಸುತ್ತಾಡಿಕೊಂಡಿದ್ದ ಕಾಳಿಂಗ ಸರ್ಪವನ್ನು ಹಿಡಿದ ಉರಗ ತಜ್ಞ ಕೆ.ಝಕಾರಿಯ ಅವರು ಅದನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.


ಎರಡು- ಮೂರು ದಿನಗಳಿಂದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಸುತ್ತಾಡಿಕೊಂಡಿತ್ತು. ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿಯ ಕೆ.ಝಕಾರಿಯಾ ಅವರು ಅಲ್ಲಿಗೆ ತೆರಳಿ ಸುಮಾರು ಒಂದು ಗಂಟೆಯಷ್ಟು ಕಾರ್ಯಾಚರಣೆಯ ಬಳಿಕ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಗುಂಡ್ಯ ಬಳಿ ದಟ್ಟಾರಣ್ಯಕ್ಕೆ ಬಿಟ್ಟಿದ್ದಾರೆ.

LEAVE A REPLY

Please enter your comment!
Please enter your name here