ವಿವಿಧ ಸಂಘ-ಸಂಸ್ಥೆಗಳಿಂದ ವಿಶ್ವ ಮಧುಮೇಹ ಮಾಸಾಚರಣೆ ಪ್ರಯುಕ್ತ ವಾಕಥಾನ್ – ಜಾಗೃತಿ ಜಾಥಾ, ಪ್ರಾಜೆಕ್ಟ್ ಸ್ವೀಟ್ ಚೈಲ್ಡ್ – ಮಕ್ಕಳ ಸಮ್ಮಿಲನ

0

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ ಡಾ.ನಝೀರ್ ಡಯಾಬಿಟಿಸ್ ಸೆಂಟರ್ ಪುತ್ತೂರು, ಇ.ಡಿ.ಆರ್.ಟಿ ಬೆಂಗಳೂರು, ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆ ಪುತ್ತೂರು, ಇನ್ನರ್ ವ್ಹೀಲ್ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಪ್ರಗತಿ ಪ್ಯಾರಾ ಮೆಡಿಕಲ್ ಕಾಲೇಜು ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಸ್ವರ್ಣ, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಪುತ್ತೂರು, ಹಾಸ್ಪಿಟಲ್ ಅಸೋಸಿಯೇಶನ್ ಪುತ್ತೂರು ಇವುಗಳ ಸಹಭಾಗಿತ್ವದಲ್ಲಿ ವಿಶ್ವ ಮಧುಮೇಹ ಮಾಸಾಚರಣೆ ಪ್ರಯುಕ್ತ ವಾಕಥಾನ್- ಜಾಗೃತಿ ಜಾಥಾ ಮತ್ತು ಪ್ರಾಜೆಕ್ಟ್ ಸ್ವೀಟ್ ಚೈಲ್ಡ್- ಮಕ್ಕಳ ಸಮ್ಮಿಲನ ಕಾರ್ಯಕ್ರಮವು ನ.29ರಂದು ಬೆಳಿಗ್ಗೆ ಜರಗಲಿದೆ.
ಬೆಳಿಗ್ಗೆ 7.30 ಗಂಟೆಗೆ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಿಂದ ಬೊಳ್ವಾರು ಪ್ರಗತಿ ಆಸ್ಪತ್ರೆವರೆಗೆ ವಾಕಥಾನ್ ಜಾಥಾ ಹೊರಡಲಿದ್ದು ಈ ಜಾಥಾವನ್ನು ಪಿಡಿಜಿ ಡಾ.ಭಾಸ್ಕರ್ ಎಸ್ ರವರು ಉದ್ಘಾಟಿಸಿ ಚಾಲನೆ ನೀಡಲಿದ್ದಾರೆ. ಬಳಿಕ 9 ಗಂಟೆಗೆ ಪ್ರಗತಿ ಆಸ್ಪತ್ರೆ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನೆರವೇರಲಿದ್ದು ಮುಖ್ಯ ಅತಿಥಿಯಾಗಿ ಸಹಾಯಕ ಆಯುಕ್ತ ಗಿರೀಶ್ ನಂದನ್ ರವರು ಭಾಗವಹಿಸಲಿದ್ದಾರೆ ಎಂದು ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಜೈರಾಜ್ ಭಂಡಾರಿ, ಕಾರ್ಯದರ್ಶಿ ಸುಜಿತ್ ರೈ, ಸಮುದಾಯ ಸೇವಾ ನಿರ್ದೇಶಕ ಸೋಮಶೇಖರ್ ರೈ, ಕಾರ್ಯಕ್ರಮ ಸಂಯೋಜಕ ಡಾ.ನಝೀರ್ ಅಹಮದ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

*ವಾಕಥಾನ್ ಜಾಥಾಗೆ ಭಾಗವಹಿಸುವವರು ಮುಂಚಿತವಾಗಿ ಹೆಸರನ್ನು ನೋಂದಾಯಿಸತಕ್ಕದ್ದು.
*ವಾಕಥಾನ್ ನಲ್ಲಿ ಭಾಗವಹಿಸುವವರುಗೆ ಟೀ-ಶರ್ಟ್ ಗಳನ್ನು ಉಚಿತವಾಗಿ ನೀಡಲಾಗುತ್ತದೆ.

  • ಲಘು ಉಪಾಹಾರದ ವ್ಯವಸ್ಥೆಯಿದೆ.
    *ಹೆಚ್ಚಿನ ಮಾಹಿತಿಗಾಗಿ 9481451929 ನಂಬರಿಗೆ ಕರೆ ಅಥವಾ ವಾಟ್ಸಪ್ ಮಾಡಬಹುದು.

LEAVE A REPLY

Please enter your comment!
Please enter your name here