ಪುತ್ತೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲದ ಕಾರ್ಯನಿರ್ವಹಣಾ ತಂಡದಿಂದ ಸನ್ಮಾನಿಸಲಾಯಿತು.
ಪುತ್ತೂರು ರೋಟರಿ ಮನೀಷಾ ಸಭಾಂಗಣದಲ್ಲಿ ನಡೆದ ಕಾರ್ಯನಿರ್ವಹಣಾ ತಂಡದ ಸಭೆಯಲ್ಲಿ ಈ ಸನ್ಮಾನ ಕಾರ್ಯಕ್ರಮ ನಡೆಯಿತು.ರಾಜ್ಯ ಸಹಕಾರಿ ಪ್ರಕೋಷ್ಠದ ಸಂಚಾಲಕ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಸಹಪ್ರಭಾರಿ ರಾಜೇಶ್ ಕಾವೇರಿ, ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರಮಂಡಲದ ಉಪಾಧ್ಯಕ್ಷ ಇಂದುಶೇಖರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.