ಪುತ್ತೂರು: ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಗಾಯತ್ರಿ (61.ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ನ.28ರಂದು ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಸರ್ವೆ ಪ್ರಾಥಮಿಕ ಆರೋಗ್ಯಕ್ಕೆ ಕೇಂದ್ರಕ್ಕೆ ತಂದು ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.
ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ವೈದ್ಯಾಧಿಕಾರಿ ದೀಪಕ್ ರೈ, ಜಿಲ್ಲಾ ರೋಗ ನಿರ್ವಾಹಕ ನಿಯಂತ್ರಣಾಧಿಕಾರಿ ನವೀನ್ ಕುಲಾಲ್, ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ನಮಿತಾ ನಾಯ್ಕ್, ಫಾರ್ಮಸಿ ಅಧಿಕಾರಿ ಸುನಿಲ್ ವಿ, ಮುಂಡೂರು ಸಿ.ಎ ಬ್ಯಾಂಕ್ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ, ನಿರ್ದೇಶಕರಾದ ಎಸ್.ಡಿ ವಸಂತ, ಶಿವನಾಥ ರೈ ಮೇಗಿನಗುತ್ತು, ಮುಂಡೂರು ಗ್ರಾ.ಪಂ ಸದಸ್ಯರಾದ ಕಮಲೇಶ್ ಸರ್ವೆದೋಳಗುತ್ತು, ಮಹಮ್ಮದ್ ಆಲಿ, ಸರ್ವೆ ಸೌಹಾರ್ದ ವೇದಿಕೆಯ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿ, ನಿವೃತ್ತ ಶಿಕ್ಷಕಿ ರತ್ನಾವತಿ, ಮುಂಡೂರು ಗ್ರಾ.ಪಂ ಮಾಜಿ ಅಧ್ಯಕ್ಷೆ ಯೋಗಿನಿ ರೈ ಮೇಗಿನಗುತ್ತು, ಮಾಜಿ ಸದಸ್ಯರಾದ ಯತೀಶ್ ರೈ ಮೇಗಿನಗುತ್ತು, ಎಸ್.ಎಂ ಶರೀಫ್ ಸರ್ವೆ, ಸರ್ವೆ ಷಣ್ಮುಖ ಯುವಕ ಮಂಡಲದ ಪ್ರಧಾನ ಕಾರ್ಯದರ್ಶಿ ಮನೋಜ್ ಸುವರ್ಣ ಸೊರಕೆ, ರೆಂಜಲಾಡಿ ಆದರ್ಶ ಸೇವಾ ಸಂಘದ ಕಾರ್ಯದರ್ಶಿ ಇಸಾಕ್ ಎಸ್.ಪಿ.ಟಿ, ಸರ್ವೆ ಗೌರಿ ಮಹಿಳಾ ಮಂಡಲದ ಅಧ್ಯಕ್ಷೆ ಮೋಹಿನಿ ಹಾಗೂ ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು, ಊರವರು ಉಪಸ್ಥಿತರಿದ್ದು ಅಂತಿಮ ನಮನ ಸಲ್ಲಿಸಿದರು.