ಪುತ್ತೂರು: ಶ್ರೀಕ್ಷೇತ್ರ ಬೆಟ್ಟಂಪಾಡಿಯ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ನ.28ರಂದು ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು.
ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆದ ಉತ್ಸವದಲ್ಲಿ ಬೆಳಿಗ್ಗೆ ಉತ್ಸವ ಬಲಿ, ದರ್ಶನ ಬಲಿ ನಡೆದು ಬಟ್ಟಲು ಕಾಣಿಕೆ, ರಾಜಾಂಗಣದಲ್ಲಿ ಪ್ರಸಾದ ವಿತರಣೆ, ಮಂತ್ರಾಕ್ಷತೆಯಾಗಿ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನೆರವೇರಿತು.
ರಾತ್ರಿ ದೇವರ ಮಹಾಪೂಜೆ, ಶ್ರೀಜಠಾಧಾರಿ ದೈವದ ಭಂಡಾರ ತೆಗೆದ ಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆದ ಬಳಿಕ ಶ್ರೀಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘದ ಸದಸ್ಯರು ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ತಾಳಮದ್ದಳೆ, ರಾತ್ರಿ 1ರಿಂದ ಜಟಾಧಾರಿ ದೈವದ ಮಹಿಮೆ ನಡೆಯಲಿದೆ.
ನಾಳೆ(ನ.29)ಧೂಮಾವತಿ, ಹುಲಿಭೂತ ನೇಮ:
ಜಾತ್ರೋತ್ಸವದ ಕೊನೆಯ ದಿನವಾದ ನ.29ರಂದು ಬೆಳಿಗ್ಗೆ ಕ್ಷೇತ್ರದ ಪರಿವಾರ ಸಾನ್ನಿಧ್ಯಗಳಾದ ಧೂಮಾವತಿ ದೈವದ ನೇಮ ಹಾಗೂ ಅಪರಾಹ್ನ ವ್ಯಾಘ್ರಚಾಮುಂಡಿ ಹುಲಿಭೂತ ನೇಮೋತ್ಸವದೊಂದಿಗೆ ಈ ವರ್ಷದ ಮೊದಲ ಜಾತ್ರೋತ್ಸವ ಸಂಪನ್ನಗೊಳ್ಳಲಿದೆ.