ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು-ಕರ್ನಾಟಕ ಹೈಕೋರ್ಟ್ ಆದೇಶ

0

ಬೆಂಗಳೂರು: ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆಗಳನ್ನು ಬಹಿರಂಗಪಡಿಸುವಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು, ಇದನ್ನು ಪಾಲಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.


ಪ್ರಕರಣವೊಂದರಲ್ಲಿ ಸಿವಿಲ್ ಕೋರ್ಟ್ ನೀಡಿದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದು ಈ ಆದೇಶ ಹೊರಡಿಸಿದೆ.ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸದ ಹಿನ್ನೆಲೆ ಹೊಸನಗರ ತಾಲೂಕಿನ ಹರಿದ್ರಾವತಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕೆ.ವಿ.ಅಶೋಕ್ ಅವರ ಆಯ್ಕೆ ಅಸಿಂಧುಗೊಳಿ ಸಿವಿಲ್ ಕೋರ್ಟ್ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು.ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ,ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ, ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನ ಪಾಲನೆಗೆ ಆದೇಶಿಸಿತು.


ಅಭ್ಯರ್ಥಿಗಳು ಚುನಾವಣಾ ಆಯೋಗ ನೀಡುವ -ರ್ಮ್ ತುಂಬಬೇಕು, ಬಾಕಿಯಿರುವ ಕ್ರಿಮಿನಲ್ ಕೇಸ್‌ಗಳ ವಿವರ ನೀಡಬೇಕು, ಟಿಕೆಟ್ ನೀಡುವ ರಾಜಕೀಯ ಪಕ್ಷಕ್ಕೂ ವಿವರ ಒದಗಿಸಬೇಕು, ಪಕ್ಷದ ವೆಬ್‌ಸೈಟ್‌ನಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ತಿಳಿಸಬೇಕು.ಪತ್ರಿಕೆಗಳಲ್ಲೂ ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆ ಪ್ರಕಟಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ನ್ಯಾಯಪೀಠ ಸೂಚನೆ ನೀಡಿದೆ.

LEAVE A REPLY

Please enter your comment!
Please enter your name here