ತುಂತುರು ನೀರಾವರಿ ಘಟಕ ಅಳವಡಿಸಲು ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನ

0

ಪುತ್ತೂರು: ಕೃಷಿ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆಯಡಿಯಲ್ಲಿ ತುಂತುರು ನೀರಾವರಿ ಘಟಕಗಳನ್ನು ಅಳವಡಿಸಲು ಬಯಸುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.


ಆಸಕ್ತ ರೈತರು ಆಧಾರ್ ಕಾರ್ಡ್, ಪಹಣಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇದ್ದಲ್ಲಿ (ಪ್ರಮಾಣ ಪತ್ರ) ರೂ 20/- ಛಾಪ ಕಾಗದ (ನೋಟರಿಯೊಂದಿಗೆ) ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿಗಳೊಂದಿಗೆ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ಯೋಜನೆಯ ಫಲಾನುಭವಿಯಾಗಲು ರೈತರು ಕಡ್ಡಾಯವಾಗಿ ಫೂಟ್ಸ್ ಐಡಿಯನ್ನು ಹೊಂದಿರಬೇಕು. ಆದ್ದರಿಂದ ರೈತರು ಈಗಾಗಲೇ ಫೂಟ್ಸ್ ಐಡಿಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೇ ಇದ್ದಲ್ಲಿ ತಮ್ಮ ಎಲ್ಲಾ ಪಹಣಿಗಳನ್ನು ಫ್ರಟ್ಸ್ ಐಡಿಗೆ ಜೋಡಣೆ ಮಾಡಿಕೊಳ್ಳುವಂತೆ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here