ನಾಳೆ(ನ.30) ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕನಕ ಜಯಂತಿ ಆಚರಣೆ

0

ಪುತ್ತೂರು: ವೈದೇಹಿ ಮತ್ತು ವೈಷ್ಣವಿ ಮಹಿಳಾ ಭಜನಾ ಮಂಡಳಿ ಬೊಳುವಾರು, ಕಾಟುಕುಕ್ಕೆ ಭಜನಾ ಚಾರಿಟೇಬಲ್ ಟ್ರಸ್ಟ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇದರ ಸಹಯೋಗದೊಂದಿಗೆ ಕನಕ ಜಯಂತಿಯ ಆಚರಣೆ ಮತ್ತು 11ನೇ ವರ್ಷದ ವಾರ್ಷಿಕೋತ್ಸವ ನ.30ರಂದು ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ.


ವಿವಿಧ ಮಹಿಳಾ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಮತ್ತು ಮಧ್ವಾಧೀಶ ವಿಠಲದಾಸ ರಾಮಕೃಷ್ಣ ಕಾಟುಕುಕ್ಕೆಯವರಿಂದ ದಾಸಸಂಕೀರ್ತನೆ ಕಾರ್ಯಕ್ರಮ ನಡೆಯಲಿದೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ರ್ಶರೀ ಮಹಾಲಿಂಗೆಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ಧಾರೆ. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಧ್ಯಾಯಿನಿ ಆಶಾ ಬೆಳ್ಳಾರೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here